ಶನಿವಾರ, ಮೇ 18, 2024
ಸಂಡೂರು: ಪ್ರತಿಷ್ಠಿತ ಶಾಲೆಗಳಲ್ಲಿ 6 ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಮೇ 18(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಅರ್ಜಿಗಳನ್ನು ಸಂಡೂರು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಮೇ 21 ರೊಳಗೆ ಸಲ್ಲಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ