ಶುಕ್ರವಾರ, ಮೇ 17, 2024
ಅಲೆಮಾರಿ ಜನರೊಂದಿಗೆ ಬೆರತು ಆರೋಗ್ಯ ಇಲಾಖೆಯಿಂದ ತಪಾಸಣೆ||ಜಾಗೃತಿ ಮಗುವಿಗೆ ಎರಡು ಬಾರಿ ತಪ್ಪದೇ ದಡಾರ-ರೂಬೆಲ್ಲಾ ಲಸಿಕೆ ಹಾಕಿಸಿರಿ:ಡಾ.ಶೇಗುಫ್ತಾ ಷಾಹೀನ್
ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ):
ಮಕ್ಕಳಿಗೆ ಬಾಲ್ಯದಲ್ಲಿ ಕಾಡುವ ಮಾರಕ ರೋಗಗಳನ್ನು ತಡೆಯಲು ದಡಾರ-ರೂಬೆಲ್ಲಾ ಒಳಗೊಂಡAತೆ 12 ಮಾರಕ ರೋಗಗಳ ವಿರುದ್ದ ತಪ್ಪದೇ ಲಸಿಕೆಗಳನ್ನು ಹಾಕಿಸಲು ಪಾಲಕರು ಕೈಜೊಡಿಸಬೇಕು ಎಂದು ಗುಗ್ಗರಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶೇಗುಫ್ತಾ ಷಾಹೀನ್ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗುಗ್ಗರಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ಅಲೆಮಾರಿ ಜನತೆ ಹೆಚ್ಚಿರುವ ಪದ್ಮಾವತೆಮ್ಮ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಅವರು ಮಾತನಾಡಿದರು.
ದಡಾರವು ಸಾಂಕ್ರಾಮಿಕ ಮತ್ತು ಮರಣಾಂತಿಕ ಖಾಯಿಲೆಯೂ ಆಗಿದ್ದು, ಮಕ್ಕಳಲ್ಲಿ ಅಂಗವಿಕತೆ ಅಥವಾ ಸಾವನ್ನು ಸಹ ತರಬಹುದು. ಇದು ಸೀನುವುದರ ಮೂಲಕ ಇತರರಿಗೆ ಹರಡುತ್ತದೆ. ದಡಾರ ನಿಮ್ಮ ಮಗುವನ್ನು ನ್ಯುಮೋನಿಯಾ, ಅತಿಸಾರ, ಮೆದುಳಿನ ಸೋಂಕಿನAತ ಪ್ರಣಾಂತಿಕ ಕಾಯಿಲೆಗಳಿಗೆ ತುತ್ತಾಗಬಹುದು. ತುರಿಕೆ, ವಿಪರೀತ ಜ್ವರ, ಕೆಮ್ಮು, ನೆಗಡಿ ಮತ್ತು ಕೆಂಗಣ್ಣು ಇವರು ದಡಾರದ ಮುಖ್ಯ ಲಕ್ಷಣಗಳಾಗಿವೆ ಎಂದು ತಿಳಿಸಿದರು.
ಗರ್ಭಿಣಿ ಸ್ತಿçÃಯರಲ್ಲಿ ರೂಬೆಲ್ಲಾ ರೋಗವು ಮಕ್ಕಳಲ್ಲಿ ಜನ್ಮತಃವಾಗಿ ಬರುವ ಸಾಧ್ಯತೆ ಇದ್ದು, ಮೊದಲ ತ್ರೆöÊಮಾಸಿಕ ಗರ್ಭಾವಸ್ಥೆಯಲ್ಲಿ ಮಗುವಿನ ವಿಪರೀತ ಅಥವಾ ಮರಣಾಂತಿಕ ಆರೋಗ್ಯ ಸಮಸ್ಯೆಯನ್ನು ತಂದೊಡ್ಡಬಹುದಾಗಿದೆ ಎಂದರು.
ಯಾವುದೇ ಮುಂಜಾಗ್ರತೆ ವಹಿಸದ ತಾಯಂದಿರಲ್ಲಿ ಕಂಡುಬರುವ ರೂಬೆಲ್ಲಾ ವೈರಸ್, ಮಗುವಿಗೆ ಗ್ಲುಕೋಮಾ, ಕಿವುಡುತನ, ಕಣ್ಣಿನಪೊರೆ, ಮೆದುಳು (ಮಾನಸಿಕತೆ ಅಸ್ವಸ್ಥತೆ ಅಥವಾ ಬುದ್ಧಿಮಾಂದ್ಯತೆ) ಮತ್ತು ಹೃದಯ ಸಂಬAಧಿತ ಕಾಯಿಲೆಗಳಿಗೆ ಈಡು ಮಾಡಬಹುದು ಮತ್ತು ಗರ್ಭಪಾತ ಅಥವಾ ನಿರ್ಜೀವ ಜನನಕ್ಕೆ ಕಾರಣವಾಗಬಹುದು ಎಂದು ತಿಳಿಸಿಕೊಟ್ಟರು.
ದಡಾರ-ರೂಬೆಲ್ಲಾ ಲಸಿಕೆಯನ್ನು ಎರಡು ಬಾರಿ ಅಂದರೆ, ಮಗುವಿನ ಒಂಭತ್ತು ತಿಂಗಳು ವಯಸ್ಸು ತುಂಬಿದ ನಂತರ ಹಾಗೂ ಮಗುವಿನ ಒಂದುವರೆ ವರ್ಷದಲ್ಲಿ ಹಾಕಿಸುವ ಮೂಲಕ ರೋಗ ತಡೆಯಲು ಸಹಕರಿಸಬೇಕು ಎಂದು ವೈದ್ಯಾಧಿಕಾರಿ ವಿನಂತಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಮಾತನಾಡಿ, ಮುಂಗಾರು ಮಳೆಯ ಆರಂಭಿಕ ಹಂತವಾಗಿರುವುದರಿAದ ಅಲ್ಲಲ್ಲಿ ನೀರು ನಿಂತುಕೊಳ್ಳುವುದು ತಪ್ಪಿಸಬೇಕು, ಸೊಳ್ಳೆಗಳ ಉತ್ಪತ್ತಿಯಿಂದ ಡೆಂಗ್ಯೂ ರೋಗ ಹರಡುವ ಸಾಧ್ಯತೆಯಿದ್ದು, ಮನೆ ಸುತ್ತಲೂ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರು.
ಎರಡು ವಾರಕ್ಕಿಂತ ಹೆಚ್ಚು ದಿನಗಳ ಕೆಮ್ಮು ಇದ್ದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಕಫ ಪರೀಕ್ಷೆ ಮಾಡಿಸುವ ಮೂಲಕ ಕ್ಷಯರೋಗ ಪತ್ತೆಗೆ ಸಹಕರಿಸಬೇಕು. ಒಂದುವೇಳೆ ಖಚಿತ ಪಟ್ಟಲ್ಲಿ ಉಚಿತ ಚಿಕಿತ್ಸೆ ಪಡೆಯುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.
ಸಮುದಾಯದಲ್ಲಿ ಅನಾದಿ ಕಾಲದಿಂದಲೂ ನಮ್ಮೊಂದಿಗಿರುವ ಕುಷ್ಠರೋಗ ಹೊಡೆದೊಡಿಸಲು ಯಾರಿಗಾದರೂ ಮೈ ಮೇಲೆ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ, ಖಚಿತಪಟ್ಟಲ್ಲಿ ಮಚ್ಚೆಗಳ ಆಧಾರದ ಮೇಲೆ ಆರು ತಿಂಗಳಿನಿAದ ಒಂದು ವರ್ಷದ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ತಿಳಿಸಿದರು.
ನಂತರದಲ್ಲಿ ಐಇಸಿ ವಿಭಾಗದ ಸಂಯೋಗದೊAದಿಗೆ ಶಿಬಿರದಲ್ಲಿ 100 ಹೆಚ್ಚು ಜನರಿಗೆ ರಕ್ತದೊತ್ತಡ, ಸಕ್ಕರೆ ಖಾಯಿಲೆ ಪರೀಕ್ಷೆ, ಗರ್ಭಿಣಿಯರ ತಪಾಸಣೆ ಹಾಗೂ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ ಉಪ್ಪಾರ್, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಯಶೋಧಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ವಿ.ಉಮಾ ಮಹೇಶ್ವರಿ, ಅರುಣಾ, ಎನ್.ಉಮಾ ಮಹೇಶ್ವರಿ, ಔಷಧೀಯ ಅಧಿಕಾರಿ ಪ್ರಿಯಾಂಕ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಿರಂಜನ್, ಈರಯ್ಯ, ಯರಿಸ್ವಾಮಿ, ದೇವರಾಜ್, ಪಂಪಾಪತಿ, ಪ್ರಕಾಶಬಾಬು, ಸ್ಥಳೀಯರಾದ ಚಾಂದಪಾಶಾ, ಮಾರೆಪ್ಪ, ಸೂರ್ಯ ನಾರಾಯಣ್ ಸೇರಿದಂತೆ ತಾಯಂದಿರು, ಸಾರ್ವಜನಿಕರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)







ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ