ಮಂಗಳವಾರ, ಮೇ 14, 2024
ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಆಚರಣೆ; ಪುಷ್ಪ ನಮನ
ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರದಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಮಾದರಿ ನೀತಿ ಸಂಹಿತೆ ಜಾರಿಯಿರುವುದರಿಂದ ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ