ಶುಕ್ರವಾರ, ಮೇ 17, 2024
ಕೊಳಗಲ್ಲು ಏಕಲವ್ಯ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ):
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕೊಳಗಲ್ಲಿನ ಏಕಲವ್ಯ ವಸತಿ ಕಾಲೇಜಿಗೆ ಪ್ರಥಮ ಪಿಯುಸಿ (ವಿಜ್ಞಾನ ಮತ್ತು ವಾಣಿಜ್ಯ ವಿಭಾಗ) ಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಯಾವುದೇ ವಸತಿ ಶಾಲೆ, ಕಾಲೇಜುಗಳಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬಹುದು.
ಮೊದಲ ಆದ್ಯತೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಂಬೇಡ್ಕರ್ ಮತ್ತು ಗಾಂಧಿತತ್ವ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರ ಕಚೇರಿ ಅಥವಾ ಮೊ.9886297280 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ