ಸೋಮವಾರ, ಮೇ 27, 2024

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಮೇ 27(ಕರ್ನಾಟಕ ವಾರ್ತೆ): ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್ ಕಿರಣ್ ಎನ್ನುವ 37 ವರ್ಷದ ಟೈಲ್ಸ್ ಹಾಕುವ ಕಾಂಟ್ರ್ಯಾಕ್ಟ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೇ 25 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಅವರು ಮನವಿ ಮಾಡಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5.7 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ವ್ಯಕ್ತಿಯು ಕಾಣೆಯಾದ ಸಂದರ್ಭದಲ್ಲಿ ಮರೂನ್ ಮತ್ತು ಬಿಳಿ ಬಣ್ಣದ ಗೆರೆಯುಳ್ಳ ಅರ್ಧ ತೋಳಿನ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ:08392-258100 ಅಥವಾ ಗಾಂಧಿನಗರ ಪೊಲೀಸ್ ಠಾಣೆಯ ದೂ:08392272192, ಪಿಎಸ್‍ಐ ಮೊ:9480803082, ಪಿಐ ಮೊ:9480803046 ಇವರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ