ಸೋಮವಾರ, ಮೇ 13, 2024
ಮಗು ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ):
ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಯನ್ ಎನ್ನುವ 01 ವರ್ಷ 03 ತಿಂಗಳು ವಯಸ್ಸಿನ ಮಗು ಏ.29 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ.
ಮಗುವಿನ ಚಹರೆ ಗುರುತು: ಎತ್ತರ 2 ಅಡಿ, ದುಂಡು ಮುಖ, ಗೋಧಿಮೈಬಣ್ಣ, ಸಾಧಾರಣ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಹಳದಿ ಬಣ್ಣದ ಟಿ-ಶರ್ಟ್ ಧರಿಸಿರುತ್ತಾನೆ.
ಮಗುವಿನ ಬಗ್ಗೆ ಸುಳಿವು ಸಿಕ್ಕಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿಎಸ್‍ಐ ಮೊ.9480803082 ಹಾಗೂ ಪಿಐ ಮೊ.9480803046 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ