ಗುರುವಾರ, ಮೇ 9, 2024

ಆಕ್ಷೇಪಣೆ ಸಲ್ಲಿಸಲು ಅವಕಾಶ

ಬಳ್ಳಾರಿ,ಮೇ 09(ಕರ್ನಾಟಕ ವಾರ್ತೆ): ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆಗಳಿಗೆ ಪ್ರತಿ ವರ್ಷ ಉದ್ದಿಮೆ ಪರವಾನಿಗೆಯನ್ನು ಪಡೆಯಲು 2024-25 ನೇ ಸಾಲಿಗೆ ಪರಿಷ್ಕøತ ದರಗಳನ್ನು ನಿಗದಿಪಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದು ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಯವರು ತಿಳಿಸಿದ್ದಾರೆ. ದರಗಳಿಗೆ ಆಕ್ಷೇಪಣೆಗಳು ಹಾಗೂ ಸಲಹೆ ಸೂಚನೆಗಳನ್ನು ಪಡೆಯಲು https://erajyapatra.karnataka.gov.in/WriteReadData/2024/7185.pdf ಕರ್ನಾಟಕ ರಾಜ್ಯ ಪತ್ರದಲ್ಲಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ, ಭೇಟಿ ನೀಡಿ ನೋಡಬಹುದು. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗದಿದ್ದಲ್ಲಿ ದರಗಳನ್ನು ಅಂತಿಮಗೊಳಿಸಲಾಗುವುದು ಹಾಗೂ ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ