ಗುರುವಾರ, ಮೇ 23, 2024

ಹೋಟಲ್ ಮ್ಯಾನೇಜ್‍ಮೆಂಟ್ ಕೌಶಲ್ಯಪೂರ್ಣ ತರಬೇತಿ; ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಸಮಾರಂಭ

ಬಳ್ಳಾರಿ,ಮೇ 23(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಖನಿಜ ನಿಧಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ಧಿ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹೋಟಲ್ ಮ್ಯಾನೇಜ್‍ಮೆಂಟ್ ಕೋರ್ಸ್‍ನ ಕೌಶಲ್ಯಪೂರ್ಣ ತರಬೇತಿ ಪಡೆದಿರುವ ಅಭ್ಯರ್ಥಿಗಳಿಗೆ ಮೇ 24 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿಯ ನಜೀರ್ ಸಭಾಂಗಣದಲ್ಲಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಜಿಲ್ಲಾ ಖನಿಜ ನಿಧಿಯ ವಿಶೇಷಾಧಿಕಾರಿ ಪಿ.ಎಸ್.ಮಂಜುನಾಥ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸೋಮಶೇಖರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಮತ್ತು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿರುವರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ಧಿ ಕೇಂದ್ರದ ಅಡಿಯಲ್ಲಿ ಹೋಟಲ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿ ಪಡೆದು, ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ