ಗುರುವಾರ, ಮೇ 9, 2024
ಡಯಟ್: ಪರೀಕ್ಷಾ ಕೇಂದ್ರ ಬದಲು
ಬಳ್ಳಾರಿ,ಮೇ 09(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಮೇ 14 ರಿಂದ 16 ರವರೆಗೆ 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹುದ್ದೆಗಳಿಗೆ ನಡೆಯುವ ಲಿಖಿತ ಪರೀಕ್ಷೆಗಳಿಗೆ ಪರೀಕ್ಷಾ ಕೇಂದ್ರವು ಬದಲಾಗಿದೆ ಎಂದು ಡಯಟ್‍ನ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಬಳ್ಳಾರಿ ಎಂದು ನಮೂದಾಗಿದ್ದು, ತಾಂತ್ರಿಕ ತೊಂದರೆಯಿಂದ ಬದಲಾಗಿ ಸೇಂಟ್ ಜೋಸೆಫ್ ಬಾಲಕಿಯರ ಪ್ರೌಢ ಶಾಲೆ, ಬೆಳಗಲ್ ಕ್ರಾಸ್ ಬಳ್ಳಾರಿ, ಈ ಪರೀಕ್ಷಾ ಕೇಂದ್ರದಲ್ಲಿ ಮೇ 14 ರಿಂದ 16 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 05 ರ ವರೆಗೆ ಲಿಖಿತ ಪರೀಕ್ಷೆಗಳು ನಡೆಯಲಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ