ಮಂಗಳವಾರ, ಮೇ 21, 2024

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆ: ಸುಸೂತ್ರ

ಬಳ್ಳಾರಿ,ಮೇ 20(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿಗೆ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗಳು ಭಾನುವಾರ ಸುಸೂತ್ರವಾಗಿ ನಡೆಯಿತು. ಬಳ್ಳಾರಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾದ್ಯಮ) ಶಾಲೆಗಳಾದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಅಲ್ಲಿಪುರ (ಕೊಳಗಲ್ಲು), ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು, ಸರ್ಕಾರಿ ಪ್ರೌಢ ಶಾಲೆ ಓಪಿಜೆ ಹತ್ತಿರ ತೋರಣಗಲ್ಲು ಮತ್ತು ಕಂಪ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು ನಾಲ್ಕು ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆಗಳು ನಡೆದವು. ಜಿಲ್ಲೆಯಲ್ಲಿ ಒಟ್ಟು 1298 ಅರ್ಜಿಗಳು ಸಲ್ಲಿಕೆಯಾಗಿದ್ದು, ಪರೀಕ್ಷೆಗೆ 1098 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 200 ವಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ