ಬಳ್ಳಾರಿ, ಮೇ 07(ಕರ್ನಾಟಕ ವಾರ್ತೆ):
ಲೋಕಸಭೆ ಸಾರ್ವತ್ರಿಕ ಚುನಾವಣೆ 2024 ರ ಅಂಗವಾಗಿ ಮೇ 07 ರಂದು ಮಂಗಳವಾರ ನಡೆದ ಮತದಾನ ದಿನದಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು.
ಪ್ರಜಾಪ್ರಭುತ್ವ ಹಬ್ಬದಲ್ಲಿ ನನ್ನ ಮತದ ಹಕ್ಕನ್ನು ಚಲಾಯಿಸಿದ್ದೇನೆ. ಜಿಲ್ಲೆಯ ಎಲ್ಲಾ ಕ್ಷೇತ್ರದ ಮತದಾರರು ತಮ್ಮ ಮತವನ್ನು ಚಲಾಯಿಸಿರಿ ಎಂಬ ಸಂದೇಶ ನೀಡಿದರು.
-------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ