ಶುಕ್ರವಾರ, ಮೇ 17, 2024

ಕಿವುಡು ಮಕ್ಕಳ ವಸತಿಯುತ ಶಾಲಾ ದಾಖಲಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಮೇ 17(ಕರ್ನಾಟಕ ವಾರ್ತೆ): ನಗರದ ಕಂಟೋನ್‍ಮೆಂಟ್‍ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕಿವುಡು ಮಕ್ಕಳ ಶಾಲೆಯ ಅಧೀಕ್ಷಕ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ. ಈ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ 7 ನೇ ತರಗತಿಯವರೆಗೆ ಕಿವುಡು ಮತ್ತು ಮೂಕ ಬಾಲಕರಿಗೆ ಉಚಿತವಾಗಿ ವಿಶೇಷ ಶಿಕ್ಷಣವನ್ನು ನೀಡಲಾಗುತ್ತಿದ್ದು, ಜೊತೆಗೆ ಕಂಪ್ಯೂಟರ್ ತರಬೇತಿ ಶಿಕ್ಷಣ, ನೃತ್ಯ ತರಬೇತಿ, ಕ್ರೀಡೆ ಮುಂತಾದ ಸಹಪಠ್ಯ ಚಟುವಟಿಕೆಗಳನ್ನು ನೀಡಲಾಗುತ್ತದೆ. ಈ ಮಕ್ಕಳಿಗೆ ಉಚಿತವಾಗಿ ಊಟ, ವಸತಿ, ಹಾಸಿಗೆ, ಹೊದಿಕೆ, ಪಠ್ಯ ಪುಸ್ತಕಗಳು, ವೈದ್ಯಕೀಯ ಮತ್ತು ಇತರ ಸೌಲಭ್ಯಗಳನ್ನು ನೀಡಲಾಗುತ್ತದೆ. ಕಿವುಡು ಮತ್ತು ಮೂಕ ಮಕ್ಕಳಿಗೆ 1 ನೇ ತರಗತಿಯಿಂದ 7 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ನುರಿತ ವಿಶೇಷ ಶಿಕ್ಷಕರಿಂದ ವಿಶೇಷ ಬೋಧನೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಎಲ್ಲಾ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ. ಯಾವುದೇ ರೀತಿಯ ಶುಲ್ಕವನ್ನು ಪಾವತಿಸಬೇಕಾಗಿರುವುದಿಲ್ಲ. 1 ನೇ ತರಗತಿಗೆ 6 ವರ್ಷದಿಂದ 10 ವರ್ಷದೊಳಗಿನ ಕಿವುಡು ಮತ್ತು ಮೂಕ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತಿದ್ದು, ಪ್ರವೇಶ ಪತ್ರದ ಜೊತೆಗೆ ಇತ್ತೀಚಿನ ಪಾಸ್‍ಪೆÇೀರ್ಟ್ ಅಳತೆಯ 6 ಭಾವಚಿತ್ರ, ಮೈಸೂರಿನ ಮಾನಸ ಗಂಗೋತ್ರಿಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಅಥವಾ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ವಿಶೇಷ ಶ್ರವಣ ತಜ್ಞರಿಂದ ಪಡೆದ ಶ್ರವಣ ದೋಷ ಪ್ರಮಾಣ ಪತ್ರ (ಡಾಕ್ಟರ್ ಸರ್ಟಿಫಿಕೆಟ್) ಹಾಗೂ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಜನ್ಮ ದಿನಾಂಕ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಯು.ಡಿ ಐಡಿ ಕಾರ್ಡ್, ರೇಷನ್ ಕಾರ್ಡ್, ವಾಸಸ್ಥಳ ಪ್ರಮಾಣಪತ್ರ ಸೇರಿದಂತೆ ಇತರೆ ದೃಢೀಕೃತ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷಕರ ಕಚೇರಿ ಅಥವಾ ದೂ.08392-297138 ಹಾಗೂ ಮೊ.9008485380 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ