ಮಂಗಳವಾರ, ಮೇ 14, 2024

ಅನಾಮಧೇಯ ಮೃತ ವ್ಯಕ್ತಿ ವಾರಸುದಾರ ಪತ್ತೆಗಾಗಿ ಮನವಿ

ಬಳ್ಳಾರಿ,ಮೇ 14(ಕರ್ನಾಟಕ ವಾರ್ತೆ): ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 40 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಬಳಲಿ ಮೇ 9 ರಂದು ಮೃತಪಟ್ಟಿದ್ದು, ವಾರಸುದಾರರು ತಿಳಿದಿರುವುದಿಲ್ಲ. ಪತ್ತೆಗಾಗಿ ಸಹಕರಿಸಬೇಕು ಎಂದು ಸಹಾಯಕ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.4 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆ ಬೋಳು ಇರುತ್ತದೆ. ಮೃತನ ಮೈಮೇಲೆ ಬಿಳಿ ಮತ್ತು ನೀಲಿ ಬಣ್ಣದ ಡಿಜೈನ್ ಟಿ-ಶರ್ಟ್ ಮತ್ತು ಹಸಿರು, ಹಳದಿ ಬಣ್ಣದ ಪ್ರಿಂಟೆಡ್ ಪಂಚೆ ಧರಿಸಿರುತ್ತಾನೆ. ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿಐ ಮೊ.9480803046 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ