ಮಂಗಳವಾರ, ಮೇ 21, 2024

ಕುಡತಿನಿ: ಸರ್ಕಾರಿ ಐ.ಟಿ.ಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಮೇ 21(ಕರ್ನಾಟಕ ವಾರ್ತೆ): ಕುಡತಿನಿ ಪಟ್ಟಣದಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಗೆ 2024-25 ಗೆ ಸಾಲಿಗೆ ವಿವಿಧ ವೃತ್ತಿಗಳಿಗೆ ಮೆರಿಟ್-ಕಮ್-ಲಿಸರ್ವೇಶನ್ ಆಧಾರದ ಮೇಲೆ ಆನ್‍ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ವಿ.ಶೇಷಣ್ಣ ಅವರು ತಿಳಿಸಿದ್ದಾರೆ. ಕಾಲೇಜಿನಲ್ಲಿ ಲಭ್ಯವಿರುವ ಇ.ಎಂ, ಜೋಡಣೆಗಾರ, ವಿದ್ಯುತ್‍ಕರ್ಮಿ, ಚರಕಿಗಾರ ವೃತ್ತಿಗಳಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಬೇಕಾಗಿರುವ ದಾಖಲೆಗಳು: ಆಧಾರ್ ಕಾರ್ಡ್, ಹೈ.ಕ (371ಜೆ) ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮತ್ತು ಗ್ರಾಮೀಣ ಪ್ರಮಾಣ ಪತ್ರ ಹಾಗೂ ಇನ್ನಿತರ ದಾಖಲಾತಿಗಳು. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಕುಡತಿನಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಜೂನ್ 03 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.9448441568, 9449666314 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ