ಸೋಮವಾರ, ಮೇ 13, 2024

ಅನಾಮಧೇಯ ವ್ಯಕ್ತಿ ಮೃತ; ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಮೇ 13(ಕರ್ನಾಟಕ ವಾರ್ತೆ): ಬಳ್ಳಾರಿ-ಬೆಂಗಳೂರು ರಸ್ತೆಯ ಪಕ್ಕದ ಈದ್ಗಾ ಮೈದಾನದ ಹತ್ತಿರ ಸುಮಾರು 40-45 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೇ ಖಾಯಿಲೆಯಿಂದ ಬಳಲಿ ಮೇ 09 ರಂದು ಸಾವನ್ನಪ್ಪಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಪತ್ತೆಗೆ ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‍ಐ ಅವರು ತಿಳಿಸಿದ್ದಾರೆ. ಚಹರೆ ಗುರುತು: ಸುಮಾರು ಎತ್ತರ 5.4 ಅಡಿ, ಗೋಧಿ ಮೈಬಣ್ಣ, ತೆಳ್ಳನೇಯ ಮೈಕಟ್ಟು ಹೊಂದಿದ್ದು, ತುಂಬು ತೋಳಿನ ಹಳದಿ ಬಣ್ಣದ ಡಿಸೈನ್‍ವುಳ್ಳ ಅಂಗಿ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಬಿಳಿ ಬಣ್ಣದ ಅರ್ಧ ಬನಿಯನ್ ಧರಿಸಿರುತ್ತಾನೆ. ಹೊಟ್ಟೆಯ ಮೇಲ್ಭಾಗದಲ್ಲಿ ಸಣ್ಣ ಕಪ್ಪು ಮಚ್ಚೆ ಇರುತ್ತದೆ. ಮೇಲ್ಕಂಡ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿಐ ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ