ಗುರುವಾರ, ಮೇ 9, 2024
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮೇ 09(ಕರ್ನಾಟಕ ವಾರ್ತೆ):
ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 45 ರಿಂದ 50 ವರ್ಷದ ಅನಾಮಧೇಯ ವ್ಯಕ್ತಿ ಯಾವುದೇ ದೀರ್ಘಾವಧಿಯ ಖಾಯಿಲೆಯಿಂದ ಬಳಲಿ ಮೇ 08 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರು ತಿಳಿದಿರುವುದಿಲ್ಲ. ಪತ್ತೆಗಾಗಿ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು: ಎತ್ತರ 5.2 ಅಡಿ, ಕೋಲುಮುಖ, ಗೋಧಿ ಮೈಬಣ್ಣ, ತೆಳ್ಳನೇಯ ಮೈಕಟ್ಟು, ಕಪ್ಪು ಕೂದಲು, ಕಪ್ಪು ಗಡ್ಡ ಮೀಸೆ ಹೊಂದಿರುತ್ತಾನೆ.
ಗ್ರೇ ಮತ್ತು ಬಿಳಿ ಮಿಶ್ರೀತ ಬಣ್ಣದ ಗೆರೆಯುಳ್ಳ ಅರ್ಧ ತೋಳಿನ ಟಿ-ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಮೃತನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಗಾಂಧಿನಗರ ಪೊಲೀಸ್ ಠಾಣೆಯ ದೂ.08392-272192, ಪಿಐ ಮೊ.9480803046 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ