ಗುರುವಾರ, ಮೇ 9, 2024
ಅನಾಮಧೇಯ ಮೃತನ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಮೇ.09(ಕರ್ನಾಟಕ ವಾರ್ತೆ):
ನಗರದ ರೈಲ್ವೇ ನಿಲ್ದಾಣದ ಬಳಿ ಸುಮಾರು 40-45 ವರ್ಷದ ಅನಾಮಧೇಯ ವ್ಯಕ್ತಿಯು ದೀರ್ಘ ಖಾಯಿಲೆಯಿಂದ ಬಳಲಿ ಮೇ 05 ರಂದು ಮೃತಪಟ್ಟಿದ್ದು, ಗಾಂಧಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಮೃತನ ಚಹರೆ: ಎತ್ತರ 5.2 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಪ್ಪು-ಬಿಳಿ ಕೂದಲು, ಕಪ್ಪು-ಬಿಳಿ ಗಡ್ಡ, ಹಣೆಯ ಮೇಲೆ ಒಂದು ಕಪ್ಪು ಮಚ್ಚೆ ಇರುತ್ತದೆ. ಮೃತನ ಮೈಮೇಲೆ ಗ್ರೇ ಕಲರ್ ಕಟ್ ಬನಿಯನ್, ತಿಳಿ ಹಸಿರು ಬಣ್ಣದ ಬರ್ಮೋಡ ಧರಿಸಿರುತ್ತಾನೆ.
ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ:08392258100, ಗಾಂಧಿ ನಗರ ಪೊಲೀಸ್ ಠಾಣೆಯ ದೂ:08392272192, ಪಿ.ಐ ಮೊ:9480803046 ಇವರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ