ಶುಕ್ರವಾರ, ಜೂನ್ 21, 2024
10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯೋಗ ಮಾಡುವುದರಿಂದ ದೇಹ ಮತ್ತು ಮನಸ್ಸು ಸದೃಢ: ನ್ಯಾ.ಎಸ್.ಹೆಚ್ ಪುಷ್ಪಾಂಜಲಿ ದೇವಿ
ಬಳ್ಳಾರಿ ,ಜೂ21(ಕರ್ನಾಟಕ ವಾರ್ತೆ):
ಪ್ರತಿಯೊಬ್ಬ ವ್ಯಕ್ತಿ ಯೋಗದಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸು ಮತ್ತು ದೇಹವನ್ನು ಸದೃಢವಾಗಿ ಕಾಪಾಡಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಎಸ್.ಹೆಚ್ ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮತ್ತು ಯೋಗಾಸನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಕೂಡ ಸಕ್ರಿಯವಾಗಿ ಯೋಗಾಸನದಲ್ಲಿ ಪಾಲ್ಗೊಂಡರು.
ಯೋಗ ಮಾಡುವುದರಿಂದ ಆರೋಗ್ಯ ಸುಧಾರಣೆಗೊಳ್ಳಲಿದ್ದು, ಇದು ಒಂದು ದಿನಕ್ಕೆ ಸೀಮಿತವಾಗದೆ ಪ್ರತಿನಿತ್ಯ ಯೋಗಾಸನಗಳನ್ನು ಮಾಡುವ ರೂಢಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಅಧ್ಯಕ್ಷರು ಹಾಗೂ ವಕೀಲರಾದ ರಾಮ್ ಭ್ರಮಂ ಅವರು ಯೋಗಾಸನಗಳ ಕುರಿತು ಮಾರ್ಗದರ್ಶನ ನೀಡಿದರು
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ, ಪ್ರಧಾನ ಸಿವಿಲ್ ಹಿರಿಯ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಪ್ರಧಾನ ಸಿವಿಲ್ ಹಿರಿಯ ನ್ಯಾಯಾಧೀಶರಾದ ಅಪರ್ಣ, ಕೌಟುಂಬಿಕ ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು, ಪ್ರಧಾನ ಸಿವಿಲ್ ಹಿರಿಯ ನ್ಯಾಯಾಧೀಶರಾದ ಮೊದಲನೇ ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ. ವಕೀಲರ ಸಂಘÀದ ಅಧ್ಯಕ್ಷ ನ್ಯಾ.ಎರ್ರಿಗೌಡ ಸೇರಿದಂತೆ ಹಲವು ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿಯವರು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸ್ವಯಂ ಸೇವಕರು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ