ಸೋಮವಾರ, ಜೂನ್ 10, 2024

ಜೂ.12, 13 ರಂದು ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’

ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ): ತಾಲ್ಲೂಕಿನ ಚೆಳ್ಳಗುರ್ಕಿ ಗ್ರಾಮದ ಶ್ರೀ ಎರ್ರಿತಾತ ಜಾತ್ರಾ ಮಹೋತ್ಸವ ಅಂಗವಾಗಿ ಜೂ.12 ಮತ್ತು 13 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಗ್ರಾಮದ ಶ್ರೀ ಎರ್ರಿತಾತ ದೇವಸ್ಥಾನ ಆವರಣದಲ್ಲಿ ‘ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ ಏರ್ಪಡಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ (ರಕ್ತ ಸುರಕ್ಷತೆ) ಚೆಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಮತ್ತು ಶ್ರೀ ಎರ್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ಮನವಿ ಮಾಡಲಾಗಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ