ಬುಧವಾರ, ಜೂನ್ 12, 2024
ಜೂ.14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಾಥಾ ಹಾಗೂ ಅಭಿನಂದನಾ ಸಮಾರಂಭ
ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಇವರ ಸಂಯುಕ್ತಾಶ್ರಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೂ.14 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಹಾಗೂ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದ್ದಾರೆ.
25 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಸಹಕರಿಸಿದ ಆಯೋಜಕ ಸಂಸ್ಥೆಗೆ ಅದೇ ದಿನದಂದು ಬೆಳಿಗ್ಗೆ 10 ಗಂಟೆಗೆ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಜಾಥಾವು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಆರಂಭವಾಗಿ ಸಂಗಮ್ ವೃತ್ತದ ಮೂಲಕ ಗಡಿಗಿ ಚೆನ್ನಪ್ಪ ವೃತ್ತದಿಂದ ಮರಳಿ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‍ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣಕ್ಕೆ ಕೊನೆಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ