ಶುಕ್ರವಾರ, ಜೂನ್ 14, 2024

ಜೂ.15 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಾಗೂ ಉಪ ವಿಭಾಗ-1 ಮತ್ತು ಉಪ ವಿಭಾಗ-2ರ ಸ್ಟ್ಯಾಂಡರ್ಡ್ ಆಫ್ ಫರ್ಪಾಮೆನ್ಸ್ ಬಗೆಗಿನ ಜಾಗೃತಿ ಸಭೆಯನ್ನು ಜೂ.15 ರಂದು ಬೆಳಿಗ್ಗೆ 11 ಗಂಟೆಗೆ ನಗರ ಜೆಸ್ಕಾಂ ಉಪವಿಭಾಗದಲ್ಲಿ ಏರ್ಪಡಿಸಲಾಗಿದೆ ಎಂದು ಜೆಸ್ಕಾಂನ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ವಿದ್ಯುತ್ ಸಮಸ್ಯೆ ಕುರಿತ ಕುಂದು ಕೊರತೆಗಳಿದ್ದಲ್ಲಿ ಸಭೆಗೆ ಭಾಗವಹಿಸಿ ಬಗೆಹರಿಸಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ