ಶುಕ್ರವಾರ, ಜೂನ್ 14, 2024

ಜೂ.15 ರಂದು ಒಂದು ದಿನದ ಕಾರ್ಯಾಗಾರ

ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ, ಪೆÇೀಕ್ಸೊ ಕಾಯ್ದೆ, ಹಾಗೂ ಮಕ್ಕಳ ರಕ್ಷಣಾ ನೀತಿ 2016 (ಪರಿಷ್ಕರಣೆ-2023) ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಸರ್ಕಾರಿ, ಅನುದಾನಿತ ಪ್ರೌಢಶಾಲೆಯ ಮುಖ್ಯ ಗುರುಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಜೂ.15 ರಂದು ಬೆಳಿಗ್ಗೆ 09.30 ಗಂಟೆಗೆ ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಗೋಪಾಲ್ ಸಾಗರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಉಮಾದೇವಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್ ಅವರು ಅಧ್ಯಕ್ಷತೆ ವಹಿಸುವರು. ಮಹಿಳಾ ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಪ್ರಭಾರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ.ಎ.ಕೆಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಕೊಪ್ಪಳ ಯೂನಿಸೇಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಡಾ.ಕೆ.ರಾಘವೇಂದ್ರ ಭಟ್ ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ