ಗುರುವಾರ, ಜೂನ್ 13, 2024

ಸಂಡೂರು: ಜೂ.15 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಜೂ.13(ಕರ್ನಾಟಕ ವಾರ್ತೆ): ಸಂಡೂರು ಜೆಸ್ಕಾಂ ಉಪ ವಿಭಾಗದ ಕಾರ್ಯ ಮತ್ತು ಪಾಲನೆ ಕಚೇರಿಯಲ್ಲಿ ಜೂನ್ 15ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಜೆಸ್ಕಾಂನ ಅಧಿಕಾರಿಗಳು ಭಾಗವಹಿಸಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಸಂಡೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸಂಡೂರು ಜೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಎ.ಉಮೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ