ಶುಕ್ರವಾರ, ಜೂನ್ 14, 2024

ಸಿರುಗುಪ್ಪ: ಜೂ.15 ರಂದು ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ

ಬಳ್ಳಾರಿ,ಜೂ,14(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜೂನ್ 15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಗ್ರಾಹಕರ ಕುಂದು ಕೊರತೆ ಮತ್ತು ಎಸ್‍ಓಪಿ ಕುರಿತು ಜಾಗೃತಿ ಮೂಡಿಸುವ ಸಭೆ ಏರ್ಪಡಿಸಲಾಗಿದೆ. ಸಿರುಗುಪ್ಪ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಂಡುಕೊಳ್ಳುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಿರುಗುಪ್ಪ ಜೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ