ಶುಕ್ರವಾರ, ಜೂನ್ 14, 2024

ಜೂನ್ 15 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಪಾಲನಾ ಶಾಖೆ-3ರ ವ್ಯಾಪ್ತಿಗೆ ಒಳಪಡುವ ವಿದ್ಯುತ್ ಗ್ರಾಹಕರ ವಿದ್ಯುತ್ ಸಂಬಂಧಿತ ದೂರುಗಳಿದ್ದಲ್ಲಿ ಆಲಿಸಿ, ಬಗೆಹರಿಸಲು ಜೂನ್ 15 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಹಲಕುಂದಿ ಗ್ರಾಮದ ಹೊಸ ಗ್ರಾಮಪಂಚಾಯತ್ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದೆ ಎಂದು ಜೆಸ್ಕಾಂನ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ. ಸಾರ್ವಜನಿಕರು ವಿದ್ಯುತ್ ಸಂಬಂಧಿತ ದೂರುಗಳಿದ್ದಲ್ಲಿ ಸಭೆಗೆ ಹಾಜರಾಗಿ ಬಗೆಹರಿಸಿಕೊಳ್ಳಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ