ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ):
ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಾರಸುದಾರರಿಲ್ಲದ ವಾಹನಗಳನ್ನು ಜಿಲ್ಲಾ ನ್ಯಾಯಾಲಯದಿಂದ ಅನುಮತಿ ಪಡೆದು ಜೂ.19 ರಂದು ಬಳ್ಳಾರಿ ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಏರ್ಪಡಿಸಲಾಗಿದೆ.
ಅಂದು ಸಾರ್ವಜನಿಕರು ಮತ್ತು ಲೈಸೆನ್ಸ್ ಹೊಂದಿದ ಸ್ಕ್ರ್ಯಾಪ್ (ಗುಜರಿ) ಅಂಗಡಿ ಮಾಲೀಕರು ಭಾಗವಹಿಸಬಹುದು ಎಂದು ಸಂಚಾರಿ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ