ಗುರುವಾರ, ಜೂನ್ 6, 2024

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ,ಜೂ.06(ಕರ್ನಾಟಕ ವಾರ್ತೆ): ನಗರದ ಕೋಟೆ ಪ್ರದೇಶದ ಸಂತ ಜಾನ್ ವಿದ್ಯಾಸಂಸ್ಥೆ ಪರೀಕ್ಷಾ ಕೇಂದ್ರದಲ್ಲಿ ಜೂ.07 ರಿಂದ 09 ರವರೆಗೆ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನಡೆಯುವ 2024 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಸಿಆರ್‍ಪಿಸಿ ಕಲಂ 144 ಮೇರೆಗೆ ನಿಬರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 02 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ನಡೆಯಲಿದ್ದು, ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಿದೆ. ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ