ಗುರುವಾರ, ಜೂನ್ 20, 2024

ಜೂ.21 ರಂದು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಸ್ವಂತ ಹಾಗೂ ಸಮಾಜಕ್ಕಾಗಿ ಯೋಗ” ಎಂಬ ಧ್ಯೇಯವಾಕ್ಯದೊಂದಿಗೆ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂ.21 ರಂದು ಬೆಳಿಗ್ಗೆ 06.15 ಗಂಟೆಗೆ ಸಂಡೂರು ತಾಲ್ಲೂಕಿನ ತೋರಣಗಲ್ಲಿನ ವಿದ್ಯಾನಗರದ ಜೆಎಸ್‍ಡಬ್ಲ್ಯೂ ಟೌನ್‍ಶಿಪ್‍ನಲ್ಲಿ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಅಧ್ಯಕ್ಷತೆ ವಹಿಸುವರು. ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತಿ ಇರುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಕ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ವಡ್ಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎಂ.ನಿಂಗಮ್ಮ ನಾಗರಾಜ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಆಯುಷ್ ಇಲಾಖೆಯ ಆಯುಕ್ತ ಬಿ.ಶ್ರೀನಿವಾಸುಲು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಹಿರಿಯ ಉಪವಿಭಾಗಾಧಿಕಾರಿ ಎನ್.ಹೇಮಂತ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸರಳಾದೇವಿ ಬಿ.ಎಸ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ