ಸೋಮವಾರ, ಜೂನ್ 24, 2024

ಜೂ.26 ರಂದು “ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ”

ಬಳ್ಳಾರಿ,ಜೂ.24(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಬಿಐಟಿಎಂ ಕಾಲೇಜು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಜೂ.26 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‍ಮೆಂಟ್ ಕಾಲೇಜು ಸಭಾಂಗಣದಲ್ಲಿ “ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ” ಕಾರ್ಯಕ್ರಮ ಏರ್ಪಡಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರೂ ಆದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು. ಬಿಐಟಿಎಂ ಕಾಲೇಜಿನ ಪ್ರಾಂಶುಪಾಲರಾದ ಯಡವಳ್ಳಿ ಬಸವರಾಜ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಘನ ಉಪಸ್ಥಿತಿ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಜಿ.ರಮೇಶ್ ಬಾಬು, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಹಾಗೂ ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡುವರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನರೋಗ ತಜ್ಞರಾದ ಡಾ.ರೋಹನ್ ವನಗುಂದಿ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ನಿರೂಪಿಸುವರು ಎಂದು ಪ್ರಕಟಣೆ ತಿಳಿಸಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ