ಶನಿವಾರ, ಜೂನ್ 1, 2024
ಜೂನ್ 6 ರಂದು ಕೌನ್ಸಿಲಿಂಗ್ ಪ್ರಕ್ರಿಯೆ
ಬಳ್ಳಾರಿ,ಜೂ.01(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗೆ ಈಗಾಗಲೇ ಪ್ರವೇಶ ಪರೀಕ್ಷೆ ನಡೆದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 05 ರಂದು ಕೌನ್ಸಿಲಿಂಗ್‍ನ್ನು ಏರ್ಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ನಗರದ ಹೊಸಪೇಟೆ ರಸ್ತೆಯ ಅಲ್ಲಿಪುರದ ಬಿಎಟಿಎಂ ಕಾಲೇಜು ಬಳಿಯ ಅಲ್ಪಸಂಖ್ಯಾತರ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮೂಲಕ ಪ್ರವೇಶದ ಸೀಟ್‍ನ್ನು (ವಸತಿ ಶಾಲೆಯನ್ನು) ಆಯ್ಕೆ ಮಾಡಿಕೊಳ್ಳಬಹುದು.
ಕೌನ್ಸಿಲಿಂಗ್ ಹಾಜರಾಗುವ ವಿದ್ಯಾರ್ಥಿಗಳು ತಪ್ಪದೇ ಕೆಳಕಂಡ ದಾಖಲೆಗಳನ್ನು ತೆಗೆದುಕೊಂಡು ಹಾಜರಾಗಬೇಕು. 5 ಫೋಟೋ, ಹಾಲ್ ಟಿಕೆಟ್ (ಪ್ರವೇಶ ಪತ್ರ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ವಿಶೇಷ ಕೋಟದಲ್ಲಿ ಆಯ್ಕೆಯಾದ ಪ್ರಮಾಣ ಪತ್ರ, 5ನೇ ತರಗತಿ ಅಂಕಪಟ್ಟಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ದ್ವಿ ಪ್ರತಿಯಲ್ಲಿ ಝರಾಕ್ಸ್ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಇ) ಪ್ರಾಂಶುಪಾಲರ ಮೊ.7353346069, ಸಂಡೂರಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9480933730, ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊ.9113280239 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ