ಮಂಗಳವಾರ, ಜೂನ್ 11, 2024
ವಿಎಸ್‍ಕೆ ವಿವಿ: ಪೌರಕಾರ್ಮಿಕರ ಮಕ್ಕಳು, ಅಂಧ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ
ಬಳ್ಳಾರಿ,ಜೂ.11(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿಗೆ ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಶೇ.5 ರಷÀ್ಟು ಶುಲ್ಕ ವಿನಾಯಿತಿ ಹಾಗೂ ಶೇ.3ರಷ್ಟು ಅಂಧ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದು ವಿವಿಯ ಕುಲಸಚಿವರಾದ ಎಸ್.ಎನ್.ರುದ್ರೇಶ್ ಅವರು ತಿಳಿಸಿದ್ದಾರೆ.
ಮಿಸಲಾತಿ ಪಡೆದ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ