ಸೋಮವಾರ, ಜೂನ್ 3, 2024
ವಸತಿ ನಿಲಯ ಕಟ್ಟಡ ಬಾಡಿಗೆಗೆ ಬೇಕಾಗಿದೆ
ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ):
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯದಲ್ಲಿ ಪ್ರಸ್ತಕ ಸಾಲಿಗೆ ಮಂಜೂರಾತಿ ಸಂಖ್ಯೆಗಿಂತ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ನಿಲಯವನ್ನು ವಿಭಜಿಸಿ ಸಂಖ್ಯಾಬಲ 100 ವಿದ್ಯಾರ್ಥಿಗಳ ವಾಸಕ್ಕೆ ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಸುಸಜ್ಜಿತ ಕಟ್ಟಡವಿದ್ದಲ್ಲಿ ಬಾಡಿಗೆ ನೀಡಲು ಆಸಕ್ತ ಮಾಲೀಕರು ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಆಸ್ತಕ್ತ ಕಟ್ಟಡದ ಮಾಲೀಕರು ಕಟ್ಟಡದ ಸೂಕ್ತ ದಾಖಲೆಗಳೊಂದಿಗೆ ಜೂನ್ 15 ರೊಳಗಾಗಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ