ಶುಕ್ರವಾರ, ಜೂನ್ 21, 2024

ಪೋಸ್ಟ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ನಗರದ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಪ್ರಸಕ್ತ ಸಾಲಿನ ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟ್ರೀಯಲ್ ಸೇಪ್ಟಿ ಕೋರ್ಸ್ ಪ್ರವೇಶಾತಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಜುಲೈ 7 ಸಂಜೆ 5.30ರ ಒಳಗಾಗಿ ಅರ್ಜಿ ಸಲ್ಲಿಸಬಹುದು, ಜು.08 ರಂದು ಮೆರಿಟ್ ಪಟ್ಟಿ ಪ್ರಕಟಿಸಿದ ನಂತರ ಅಂದಿನಿಂದಲೆ ಪ್ರವೇಶ ಪ್ರವೇಶಾತಿ ಪ್ರಾರಂಭಗೊಳ್ಳುತ್ತದೆ. ಪ್ರವೇಶ ಶುಲ್ಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 50 ರೂಪಾಯಿ, ಹಾಗೂ ಹಿಂದುಳಿದ ವರ್ಗದವರು ಮತ್ತು ಸಾಮಾನ್ಯ ವರ್ಗದವರಿಗೆ 100 ರೂಪಾಯಿ ನಿಗದಿಯಾಗಿದ್ದು, ಅರ್ಜಿಯನ್ನು ಪ್ರಾಂಶುಪಾಲರ ಕಚೇರಿಯಲ್ಲಿ ನೀಡಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ