ಮಂಗಳವಾರ, ಜೂನ್ 25, 2024

ಕೃಷಿ ಇಲಾಖೆ: ಬೆಳೆ ವಿಮೆ ನೋಂದಣಿಗೆ ಆಹ್ವಾನ

ಬಳ್ಳಾರಿ,ಜೂ.25(ಕರ್ನಾಟಕ ವಾರ್ತೆ): ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಕೃಷಿ ಬೆಳೆಗಳ ವಿಮೆ ನೋಂದಣಿಗೆ ನೋಂದಾಯಿಸಿಕೊಳ್ಳಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ. ರೈತರು ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ಕಡಲೆ, ಕುಸುಬೆ ಮುಂತಾದ ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಿಕೊಳ್ಳಬಹುದು. ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾ ಯೋಜನೆಯಿಂದ ಬಹಳಷ್ಟು ಅನುಕೂಲವಾಗಲಿದೆ. ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ತಮ್ಮ ವ್ಯವಹಾರದ ಬ್ಯಾಂಕ್‍ಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲೂಕು ಪ್ರತಿನಿಧಿಗೆ (8277472721) ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ