ಗುರುವಾರ, ಜೂನ್ 13, 2024
ಬೀದರ ವಾರ್ತಾಧಿಕಾರಿ ಸುರೇಶ.ಜಿ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ
ಬಳ್ಳಾರಿ,ಜೂ.13(ಕರ್ನಾಟಕ ವಾರ್ತೆ):
ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಸುರೇಶ ಜಿ. ರವರಿಗೆ ಡಾಕ್ಟರೇಟ್ ಪದವಿ ನೀಡಿದೆ. ಸುರೇಶ ಅವರು ಗುಲಬರ್ಗಾ ವಿಶ್ವವಿದ್ಯಾಲಯ ಮನೋವಿಜ್ಞಾನ ವಿಭಾಗದಲ್ಲಿ “ದಿ ಇಂಪ್ಯಾಕ್ಟ್ ಆಫ್ ಡಿಪ್ರವೇಶನ್ ಆಂಡ್ ಯೂತ್ ಪ್ರಾಬ್ಲಮ್ಸ್ ಆನ್ ಅಚಿವ್‍ಮೆಂಟ್ ಮೋಟಿವೇಷನ್ ಸೆಲ್ಪ್ ಕಾನ್ಸೆಪ್ಟ್ ಆಂಡ್ ಅಕಾಡೆಮಿಕ್ ಅಚಿವ್‍ಮೆಂಟ್'' ಎಂಬ ಸಂಶೋಧನಾ ಪ್ರಬಂಧವನ್ನು ಕಲಬುರಗಿಯ ಶರಣಬಸವೇಶ್ವರ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾಗಿದ್ದ ಡಾ. ಆರ್. ವೆಂಕಟರೆಡ್ಡಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ್ದರು. ಈ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಡಾಕ್ಟರೇಟ್ ಪದವಿ ನೀಡಿದೆ.
ಸುರೇಶ ತಂದೆ ಗುಂಡಪ್ಪ ಗುತ್ತೆದಾರ ಇವರು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಹಾಲಗಡ್ಲಾ ಗ್ರಾಮದವರಾಗಿದ್ದು, ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಮನೋವಿಜ್ಞಾನ ವಿಭಾಗದಲ್ಲಿ ಅರೆಕಾಲಿಕ ಸಂಶೋಧನಾ ವಿದ್ಯಾರ್ಥಿಯಾಗಿ ಅಧ್ಯಯನ ಮಾಡುತ್ತಿದ್ದರು.
ಪ್ರಸ್ತುತ ಇವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರನಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರ ಸಾಧನೆಗೆ ಅವರ ಅಧಿಕಾರಿ ವೃಂದ, ಗುರು ವೃಂದ ಹಾಗೂ ಕುಟುಂಬದ ಸದಸ್ಯರು ಮತ್ತು ಸಹಪಾಠಿ ಮಿತ್ರರು ಹರ್ಷ ವ್ಯಕ್ತಪಡಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ