ಬುಧವಾರ, ಜೂನ್ 26, 2024

ತೋಟಗಾರಿಕೆ ಇಲಾಖೆ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಮೆಗಾ ಮೈಕ್ರೋ ಯೋಜನೆಯಡಿ ಅಗ್ರಿ-ಕಲ್ಚರಲ್ ಸಿಸ್ಟಮ್ ಅಭಿವೃದ್ಧಿ ಪಡಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಬಳ್ಳಾರಿ, ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದ ಅಡಿ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ, ಬೆಣ್ಣೆ ಹಣ್ಣು, ಎಳೆ ನೀರು, ತೆಂಗಿನಕಾಯಿಗಳ ಪ್ರದೇಶ ವಿಸ್ತರಣೆ, ತರಕಾರಿ, ಹೂ ಬೆಳೆ ಪ್ರದೇಶ ವಿಸ್ತರಣೆ, ಜೀವಸಾರ ಘಟಕ ಸ್ಥಾಪನೆ, ಅರಣ್ಯ ಬೆಳೆ ಮುಂತಾದ ಘಟಕಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಮೇಲಿನ ಎಲ್ಲಾ ಘಟಕಗಳನ್ನು ರೈತರು ತಮ್ಮ ತಾಕಿನಲ್ಲಿ ಕಡ್ಡಾಯವಾಗಿ ಅಳವಡಿಸಿಕೊಂಡಲ್ಲಿ ನಿಯಮಾನುಸಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08392-278177 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ರತ್ನ ಯರಗಲ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ