ಗುರುವಾರ, ಜೂನ್ 27, 2024
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.27(ಕರ್ನಾಟಕ ವಾರ್ತೆ):
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 20ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ತಿಳಿಸಿದ್ದಾರೆ.
ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿದವರ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗಗಳಿಗೆ ಸೇರಿದವರ ಆದಾಯ ಮಿತಿಯು ರೂ.1 ಲಕ್ಷ ಇರಬೇಕು.
ಆಸಕ್ತ ವಿದ್ಯಾರ್ಥಿಗಳು https://shp.karnataka.gov.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ತಾಲ್ಲೂಕು ಅಧಿಕಾರಿಗಳ ಕಚೇರಿ ಮತ್ತು ಸಹಾಯವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ