ಬುಧವಾರ, ಜೂನ್ 26, 2024

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜೂ.26(ಕರ್ನಾಟಕ ವಾರ್ತೆ): ನಗರದ ಆರ್‍ವೈಎಂಸಿ ಇಂಜಿನಿಯರಿಂಗ್ ಕಾಲೇಜ್ ಎದುರುಗಡೆಯ ಜ್ಯೂಸ್ ಸೆಂಟರ್ ಮುಂಭಾಗದ ರಸ್ತೆ ಪಕ್ಕದ ಫುಟ್‍ಪಾತ್ ಮೇಲೆ ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದ ಅಂದಾಜು 65 ವರ್ಷದ ಅನಾಮಧೇಯ ಗಂಡು ಮೃತ ದೇಹ ದೊರೆತ್ತಿದ್ದು, ಪತ್ತೆಗೆ ಸಹಕರಿಸಬೇಕೆಂದು ಕೌಲ್ ಬಜಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ. ಮೃತನ ಚಹರೆ: ಅಂದಾಜು 5 ಅಡಿ, ತೆಳುವಾದ ಮೈಕಟ್ಟು, ದುಂಡು ಮುಖ, ಸಾಧಾರಣ ಎಣ್ಣೆಗೆಂಪು ಮೈಬಣ್ಣ, ಬಿಳಿ ಮತ್ತು ಕಪ್ಪು ಗಡ್ಡ ಮೀಸೆ ಬಿಟ್ಟಿರುತ್ತಾನೆ. ಮೃತನ ಮೈಮೇಲೆ ಒಂದು ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಕಂದು ಬಣ್ಣದ ಪ್ಯಾಂಟ್ ಇರುತ್ತದೆ. ಈ ಮೇಲ್ಕಂಡ ಚಹರೆ ಗುರುತುಳ್ಳ ಮೃತನ ವಾರಸುದಾರರ ಬಗ್ಗೆ ಮಾಹಿತಿ ದೊರೆತಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ಮೊ.9480803047, ಮೊ.9480803084 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ