ಸೋಮವಾರ, ಜೂನ್ 10, 2024
ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ):
ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ 2024-25 ನೇ ಸಾಲಿನ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪೆÇ್ಲೀಮಾ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಟಿಐ ಮತ್ತು ದ್ವಿತೀಯ ಪಿಯುಸಿ (ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು ಜೂನ್ 25 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಜೂ.26 ರಂದು ಸಂಸ್ಥೆಯಲ್ಲಿ ಪ್ರಕಟಿಸಲಾಗುವುದು. ಜೂ.27 ಮತ್ತು 28 ರಂದು ಪ್ರವೇಶ ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಮೊದಲನೇ ಗೇಟ್ ಹತ್ತಿರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನ ಪ್ರಾಂಶುಪಾಲರ ಕಚೇರಿ ಅಥವಾ ದೂ.08392-242228 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ