ಸೋಮವಾರ, ಜೂನ್ 3, 2024

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕರ ಕುಂದು-ಕೊರತೆ ಅಹವಾಲು ಸ್ವೀಕಾರ ಸಭೆ

ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧಿಕಾರಿಗಳಿಂದ ಬಳ್ಳಾರಿ, ಕಂಪ್ಲಿ ಮತ್ತು ಸಂಡೂರು ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ. *ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:* ಜೂ.06 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣ. ಜೂ.12 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಬಳ್ಳಾರಿಯ ಹೊಸ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣ. ಜೂ.19 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣ. ಸಾರ್ವಜನಿಕರು ತಮ್ಮ ಕುಂದು-ಕೊರತೆ ಅವಹಾಲುಗಳಿದ್ದಲ್ಲಿ ನಿಗದಿತ ದಿನ ಮತ್ತು ಸ್ಥಳದಲ್ಲಿ ನಡೆಯುವ ಸಭೆ ಹಾಜರಾಗಿ ತಮ್ಮ ಅಹವಾಲು ಸಲ್ಲಿಸಬಹುದು. ಅರ್ಜಿಗಳನ್ನು ಸ್ವೀಕರಿಸಿ ವಿಚಾರಿಸಲಾಗುತ್ತದೆ ಹಾಗೂ ಸಾರ್ವಜನಿಕರಿಗೆ ಲೋಕಾಯುಕ್ತರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿಗಳನ್ನು ಸಲ್ಲಿಸಲು ನಮೂನೆ/ಫಾರಂ ನಂ.1 ಮತ್ತು 2 ಸಹ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ