ಸೋಮವಾರ, ಜೂನ್ 24, 2024

ವ್ಯಕ್ತಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಜೂ.24(ಕರ್ನಾಟಕ ವಾರ್ತೆ): ಇಲ್ಲಿನ ದೇವಿನಗರದ 3ನೇ ಕ್ರಾಸ್‍ನ ನಿವಾಸಿ ರಮೇಶ್ ಗೌಡ ಎನ್ನುವ 30 ವರ್ಷದ ವ್ಯಕ್ತಿಯು ಮೇ 31 ರಂದು ಕಾಣೆಯಾಗಿರುವ ಕುರಿತು ಕೌಲ್‍ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ ಗುರುತು: ಅಂದಾಜು 5.8 ಅಡಿ ಎತ್ತರ, ದೃಢ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಮೂಗಿನ ಬಲಗಡೆ ಕಪ್ಪುಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್‍ಐ ಮೊ.9480803085 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ