ಸೋಮವಾರ, ಜೂನ್ 10, 2024
ತೋಟಗಾರಿಕೆ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜೂ.10(ಕರ್ನಾಟಕ ವಾರ್ತೆ):
ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುμÁ್ಠನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.
ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ರೈತರ ಕಲ್ಯಾಣಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ್, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ, ಬೈಯೋಡೈಜಿಸ್ಟರ್, ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಈ ಯೋಜನೆಗಳ ಮಾಹಿತಿ ಪಡೆದು ಅರ್ಜಿ ಸಲ್ಲಿಸಿ ಯೋಜನೆಯ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ