ಬುಧವಾರ, ಜುಲೈ 31, 2024

ಸ್ವಾತಂತ್ರö್ಯ ದಿನಾಚರಣೆಯ ಪೂರ್ವಭಾವಿ ಸಭೆ | ಸಂಭ್ರಮದ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಆಗಸ್ಟ್ 15 ರಂದು ನಡೆಯುವ 78 ನೇ ಸ್ವಾತಂತ್ರೊö್ಯÃತ್ಸವದ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಸಂಭ್ರಮದಿAದ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು. ಕಾರ್ಯಕ್ರಮವು ನಗರದ ವಿಮ್ಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಅಚ್ಚುಕಟ್ಟಾಗಿ ಹಮ್ಮಿಕೊಳ್ಳಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ವಿವಿಧ ಸಮಿತಿಗಳನ್ನೊಳಗೊಂಡ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಆ.15 ರಂದು ಬೆಳಿಗ್ಗೆ 8.30 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತ(ಮೋತಿ ವೃತ್ತ)ದ ಬಳಿ ಬೃಹತ್ ಧ್ವಜಾರೋಹಣಾ ನಡೆಯಲಿದೆ. ನಂತರ 8.45 ಗಂಟೆಗೆ ವಿಮ್ಸ್ ಬಳಿಯ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಾಗುವುದು. ಬಳಿಕ ಬೆಳಿಗ್ಗೆ 09 ಗಂಟೆಗೆ ನಗರದ ವಿಮ್ಸ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು, ಈ ಬಾರಿ ಕಂದಾಯ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಹೇಳಿದರು. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಬೇಕು. ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ವೇದಿಕೆ ಸಿದ್ದತೆ, ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಪೊಲೀಸ್, ಶಾಲಾ ವಿದ್ಯಾರ್ಥಿಗಳ ತಂಡಗಳನ್ನೊಳಗೊAಡAತೆ ಕವಾಯತು ಅತ್ಯುತ್ತಮವಾಗಿ ನಡೆಸಲು ಪೂರ್ವಭಾವಿ ತರಬೇತಿ ಸಿದ್ದತೆ ಮಾಡಿಕೊಳ್ಳಬೇಕು ಎಂದರು. ವಿದ್ಯಾರ್ಥಿ, ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಶ್ಯಾಮಿಯಾನಾ, ಆಸನದ ವ್ಯವಸ್ಥೆ, ನುರಿತ ವೈದ್ಯರೊಂದಿಗೆ ತುರ್ತು ಚಿಕಿತ್ಸಾ ಅಂಬ್ಯುಲನ್ಸ್ ಹಾಗೂ ಅಗ್ನಿಶಾಮಕ ವಾಹನದ ವ್ಯವಸ್ಥೆ ಮಾಡಬೇಕು. ಮೈದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಸ್ವಚ್ಛತೆ ನಿರ್ವಹಿಸಬೇಕು. ನಗರದ ವಿಮ್ಸ್ ಕ್ರೀಡಾಂಗಣ ಹಾಗೂ ಪ್ರಮುಖ ವೃತ್ತಗಳ ಸ್ವಚ್ಛತೆಗೆ ಮಹಾಪಾಲಿಕೆ ಆಯುಕ್ತರು ಕ್ರಮ ವಹಿಸಬೇಕು ಎಂದು ಸೂಚಿಸಿದರು. ದೀಪಾಲಂಕಾರ, ಇನ್ನಿತರೆ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಿಡಿಪಿಐ ಅಧಿಕಾರಿಗಳು ಸಮನ್ವಯತೆಯಿಂದ ಕ್ರಮ ಕೈಗೊಳ್ಳಬೇಕು ಎಂದರು. ಶಾಲಾ-ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಸನ್ಮಾನಿತರಿಗಾಗಿ ಪ್ರತ್ಯೇಕವಾಗಿ ನಿಗದಿತ ಆಸನದ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಸ್ವಾತಂತ್ರೊö್ಯÃತ್ಸವ ದಿನಾಚರಣೆಯ ದಿನ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿಗದಿತ ಸ್ಥಾನಗಳಲ್ಲಿ ಉಪಸ್ಥಿತರಿದ್ದು, ಶಿಸ್ತಿನಿಂದ ತಮ್ಮ ಕಾರ್ಯ ನಿರ್ವಹಿಸಬೇಕು. ಒಟ್ಟಾರೆಯಾಗಿ ರಾಷ್ಟೀಯ ಹಬ್ಬವಾದ ಸ್ವಾತಂತ್ರೊö್ಯÃತ್ಸವ ಸಮಾರಂಭವನ್ನು ಆಸಕ್ತಿಯಿಂದ ಆಚರಿಸಿ ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದರು. ಸಭೆಯಲ್ಲಿ ಲಘು-ಉಪಹಾರದ ವ್ಯವಸ್ಥೆ, ಪರೇಡ್ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಧ್ವನಿವರ್ಧಕ ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್, ಎಎಸ್ಪಿ ರವಿಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ----------

ವಿಶ್ವ ರೇಂಜರ್ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭ | ಅರಣ್ಯ ಉಳಿವಿಕೆಯಲ್ಲಿ ಅರಣ್ಯ ರಕ್ಷಕರ ಸೇವೆ ಅನನ್ಯ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ವಿಶ್ವದಾದ್ಯಂತ ಅರಣ್ಯ, ವನ್ಯಜೀವಿಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವವರಲ್ಲಿ ಅರಣ್ಯ ರಕ್ಷಕರ (ಫಾರೆಸ್ಟ್ ರೇಂಜರ್) ಸೇವೆ ಸ್ಮರಣೀಯ ಎಂದು ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಡಾ.ಸಂಜಯ್ ಬಿಜ್ಜೂರ್ ಅವರು ಹೇಳಿದರು. ಅರಣ್ಯ ಇಲಾಖೆ ಬಳ್ಳಾರಿ ಪ್ರಾದೇಶಿಕ ವಿಭಾಗ ವತಿಯಿಂದ ನಗರದ ಬೆಳಗಲ್ ಕ್ರಾಸ್‌ನ ಸಸ್ಯ ಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ರೇಂಜರ್ ದಿನ ಹಾಗೂ ಪ್ರಕೃತಿ ಭವನ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶವು ಪ್ರಗತಿ ಪಥದಲ್ಲಿ ಸಾಗಬೇಕಾದರೆ ನೈಸರ್ಗಿಕ ಸಂಪನ್ಮೂಲ ಅವಶ್ಯಕವಾಗಿದೆ. ದೇಶ ಹಾಗೂ ಮಾನವ ಸಂಪನ್ಮೂಲವನ್ನು ಪ್ರಾಣ ಪಣಕಿಟ್ಟು ಯಾರು ಉಳಿಸಿಕೊಳ್ಳುತ್ತಾರೋ ಅವರನ್ನು ಅರಣ್ಯ ರಕ್ಷಕ (ರೇಂಜರ್) ಎಂದು ಕರೆಯಲಾಗುತ್ತದೆ. ಯಾವ ದೇಶ ನೈಸರ್ಗಿಕ ಸಂಪನ್ಮೂಲಗಳ ಉಳಿಸಿಕೊಂಡಿವೋ ಅಂತಹ ದೇಶಗಳು ಇಂದು ಸುಭಿಕ್ಷವಾಗಿವೆ. ಈ ನಿಟ್ಟಿನಲ್ಲಿ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಣೆ ಮಾಡಬೇಕು. ಹಾಗೆಯೇ ಪರಿಸರ ಸಂರಕ್ಷಣೆ ಮಾಡುವವರನ್ನು ಗೌರವಿಸಬೇಕು. ವೈಜ್ಞಾನಿಕವಾಗಿ ಗಿಡ ಮರ ನೆಡಬೇಕು ಎಂದು ತಿಳಿಸಿದರು. ಉಪ ಅರಣ್ಯ ಸಂರಕ್ಷಣಾಕಾರಿ ಸಂದೀಪ್ ಎಚ್ ಸೂರ್ಯವಂಶಿ ಅವರು ಮಾತನಾಡಿ, ನೈಸರ್ಗಿಕವಾಗಿ ಸಂರಕ್ಷಿತ ಪ್ರದೇಶಗಳನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ರೇಂಜರ್‌ಗಳನ್ನು ಗೌರವಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜು.31 ರಂದು ವಿಶ್ವ ರೇಂಜರ್ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನದಂದು ರೇಂಜರ್‌ಗಳ ಪ್ರಮುಖ ಕೆಲಸವನ್ನು ಬೆಂಬಲಿಸಿ ಗೌರವಿಸಲಾಗುತ್ತದೆ. ಕರ್ತವ್ಯದ ವೇಳೆ ಪ್ರಾಣ ಕಳೆದಕೊಂಡ ರೇಂಜರ್‌ಗಳಿಗೆ ಶ್ರದ್ಧಾಂಜಲಿ ಕೂಡ ಸಲ್ಲಿಸಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಗಣ್ಯರು ಅರಣ್ಯ ಇಲಾಖೆಯ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದರು. ಅಂಚೆ ಅಧೀಕ್ಷಕ ಪಿ.ಚಿದಾನಂದ ಅವರು ಮಾತನಾಡಿ, ವಿಶೇಷ ಅಂಚೆ ಲಕೋಟೆಯು ಅಂಚೆ ಕಚೇರಿಗಳ ಮೂಲಕ ಅಂಚೆ ಚೀಟಿ ಸಂಗ್ರಹಕಾರರ ಮೂಲಕ ವಿಶ್ವದಾದ್ಯಂತ ರೇಂಜರ್‌ಗಳ ಕುರಿತು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದರು. ಈ ವಿಶೇಷ ಲಕೋಟೆಯ ಮೇಲೆ 2024 ರ ವಿಶ್ವ ರೇಂಜರ್ ದಿನದ ಧ್ಯೇಯ “30 ರೊಳಗೆ 30”. ಅಂದರೆ 2030 ರೊಳಗೆ ಶೇ.30 ರಷ್ಟು ಭೂ ಪ್ರದೇಶವನ್ನು ಪರಿಣಾಮಕಾರಿಯಾಗಿ ಸಂರಕ್ಷಿಸಬೇಕು ಮತ್ತು ನಿರ್ವಹಿಸಬೇಕು ಎಂಬ ಉದ್ದೇಶವನ್ನು ಹೊಂದಿರುವುದು ವಿಶೇಷ ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಉಪ ಮೇಯರ್ ಡಿ.ಸುಕುಂ, ಅರಣ್ಯ ಇಲಾಖೆಯ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಸಿತ್ಮಾ ಬಿಜ್ಜೂರ್, ವಿಜಯನಗರ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಕಾರಿ ಅರ್ಸ್ಲಾನ್ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಇದ್ದರು. ---------

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಜಿಲ್ಲೆಯ 10 ಪರೀಕ್ಷಾ ಕೇಂದ್ರಗಳಲ್ಲಿ ಆ.02 ರಿಂದ 09 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು-3 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. -------

ರಸ್ತೆ ನಾಮಕರಣ; ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ 1 ನೇ ವಾರ್ಡ್ನ ತಾಳೂರು ರಸ್ತೆಯ ಡಾ.ಪುನೀತ್ ರಾಜ್‌ಕುಮಾರ್ ರಸ್ತೆಯ ವೃತ್ತವನ್ನು ಶ್ರೀ ಮಹಾಯೋಗಿ ವೇಮನ ವೃತ್ತ ಎಂದು ನಾಮಕರಣ ಮಾಡುವುದಾಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ 30 ದಿನದೊಳಗಾಗಿ ಲಿಖಿತ ರೂಪದಲ್ಲಿ ಪಾಲಿಕೆ ಕಚೇರಿ ಸಲ್ಲಿಸಬಹುದು ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದೇ ಇದ್ದಲ್ಲಿ ಸರ್ಕಾರದ ಸುತ್ತೋಲೆ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಸೋಮಸಮುದ್ರ; ಆರೋಗ್ಯ ತಪಾಸಣೆ ಕಾರ್ಯಕ್ರಮ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ರಾಷ್ಟಿçÃಯ ಆಯುಷ್ ಅಭಿಯಾನ, ಆಯುಷ್ಮಾನ್ ಭಾರತ್ ಯೋಜನೆಯಡಿ ಕೋಳೂರು ಆಯುಷ್ಮಾನ್ ಆರೋಗ್ಯ ಮಂದಿರ ವತಿಯಿಂದ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಹಿರಿಯ ನಾಗರಿಕರಿಗೆ ಬುಧವಾರ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ಗ್ರಾಮಸ್ಥರು ಭಾಗವಹಿಸಿ, ಹಿರಿಯ ನಾಗರಿಕರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಮಲ ಬದ್ಧತೆ, ಮಂಡಿನೋವು, ಆರ್‌ಬಿಎಸ್ ಸೇರಿದಂತೆ ಮುಂತಾದ ಆರೋಗ್ಯ ಸಮಸ್ಯೆಗಳ ಪರಿಹಾರ ಕಂಡುಕೊAಡರು. ಶಿಬಿರದಲ್ಲಿ 250ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು, ವೈದ್ಯರಾದ ಡಾ.ಕಲ್ಯಾಣಿ, ಡಾ.ರಾಜೇಶ್ವರಿ, ಡಾ.ಮಾಧುರಿ, ಡಾ.ಸುಜಾತ, ಡಾ.ತಿಪ್ಪೇಸ್ವಾಮಿ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಹಾಗೂ ಇನ್ನೀತರರು ಇದ್ದರು. --------

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ ದರದಲ್ಲಿ ಲಭ್ಯ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ 2024 ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ವೆಬ್‌ಸೈಟ್ (ನಮ್ಮ ಪುಸ್ತಕಗಳ ವಿಭಾಗ) ನಲ್ಲಿ ಕೂಡ ಶೇ.50 ರಿಯಾಯಿತಿ ಲಭ್ಯವಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. ---------

ಮಲ್ಲಿಕಾರ್ಜುನ.ಹೆಚ್.ಎಸ್ ಅವರಿಗೆ ಪಿಹೆಚ್‌ಡಿ ಪದವಿ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಸಿರುಗುಪ್ಪ ಪಟ್ಟಣದ ಕೆಹೆಚ್‌ಬಿ ಕಾಲೋನಿಯ ನಿವಾಸಿಯಾದ ಮಲ್ಲಿಕಾರ್ಜುನ.ಹೆಚ್.ಎಸ್ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ನೀಡಿದೆ. ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತç ವಿಭಾಗದ ವ್ಯವಹಾರ ಅಧ್ಯಯನ ನಿಕಾಯದ ಸಹಾಯಕ ಪ್ರಾಧ್ಯಪಕರಾದ ಡಾ.ಚಲವಾದಿ ಚನ್ನಬಸಪ್ಪ ಈರಪ್ಪ ಅವರ ಮಾರ್ಗದರ್ಶನದಲ್ಲಿ “ಪರ್‌ಫಾರ್ಮನ್ಸ್ ಆಂಡ್ ಪ್ರಾಬ್ಲಮ್ಸ್ ಆಫ್ ಫಾಸ್ಟ್ ಮೂವಿಂಗ್ ಕಂಸೂಮರ್ ಗೂಡ್ಸ್ ಫರ್ಮ್ಸ್ ಇನ್ ಕರ್ನಾಟಕ - ಆನ್ ಎಂಪಿರಿಕಲ್ ಸ್ಟಡಿ” ಎಂಬ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ ವಿಶ್ವವಿದ್ಯಾಲಯವು ಪಿಹೆಚ್‌ಡಿ ಪದವಿ ಘೋಷಿಸಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ. ---------

ಆ.01 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ನಗರದ ಹವಂಭಾವಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬ ಬದಲಾಯಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಆ.01 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಎಫ್-10 ಫೀಡರ್ ವ್ಯಾಪ್ತಿಯಲ್ಲಿ ಬರುವ ಅಶೋಕ ನಗರ, ಹವಂಭಾವಿ, ಟಿಎಂಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿವಾರ ಗ್ರಾಮದ 3ಆರ್ ಕಾಲುವೆಯಲ್ಲಿ ಸುಮಾರು 60-65 ವ಼ರ್ಷದ ಅನಾಮಧೇಯ ಮೃತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಚಹರೆ ಗುರುತು: ಅಂದಾಜು 5.4 ಅಡಿ ಎತ್ತರ, ಕೋಲುಮುಖ, ಕೆಂಪು ಮೈಬಣ್ಣ, ತಲೆಯಲ್ಲಿ 2-3 ಇಂಚು ಕಪ್ಪು ಮತ್ತು ಬಿಳಿ ಮಿಶ್ರಿತ ಕೂದಲು ಇದ್ದು, ತಲೆಗೆ ತೆರಚಿದ ರಕ್ತ ಗಾಯಗಳಿರುತ್ತವೆ. ಎರಡು ಕೈಗಳಿಗೆ ಮತ್ತು ಎರಡು ಕಾಲುಗಳಿಗೆ ತೆರಚಿದ ಗಾಯಗಳಿದ್ದು, ಕೊರಳಲ್ಲಿ ತಾಯತ ಹಾಗೂ ಸೊಂಟಕ್ಕೆ ಕೆಂಪು ಉಡುದಾರ ಇರುತ್ತದೆ. ಮೃತನ ಮೈಮೇಲೆ ಬಿಳಿ ಬಣ್ಣದ ನೀಲಿ ಗೀರುಳ್ಳ ತುಂಬು ತೋಳಿನ ಅಂಗಿ ಧರಿಸಿರುತ್ತಾನೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಮಂಗಳವಾರ, ಜುಲೈ 30, 2024

ಆ.01 ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆ.01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಲಾಗಿದೆ. ವಸತಿ ಮತ್ತು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜಡ್ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಎಸ್‌ಜಿಟಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಸವರಾಜ ಅಮಾತಿ ಅವರು ವಿಶೇಷ ಉಪನ್ಯಾಸ ನೀಡುವರು. ಬಳ್ಳಾರಿಯ ಸಂಗೀತ ಶಿಕ್ಷಕರಾದ ಕೆ.ದೊಡ್ಡಬಸವ ಗವಾಯಿ ಅವರಿಂದ ವಚನ ಗಾಯನ ಕಾರ್ಯಕ್ರಮ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಮುಂತಾದ ಗಣ್ಯರು ಪಾಲ್ಗೊಳ್ಳುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ ಅವರು ತಿಳಿಸಿದ್ದಾರೆ. *ಜಾಗೃತಿ ಜಾಥ:* ಅಂದು ಬೆಳಿಗ್ಗೆ 09.30 ಗಂಟೆಗೆ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿನ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದ ಸಭಾಂಗಣದವರೆಗೆ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಲಿದೆ. -----------

“ಬಾಲಗೌರವ ಪ್ರಶಸ್ತಿ” ಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರ್‌ರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ” ಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು ಕ್ರೀಡೆ, ಸಂಗೀತ, ನೃತ್ಯ ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಸೇರಿ 07 ಕ್ಷೇತ್ರದಲ್ಲಿ ಅಸಾಧರಣೆ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಾಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಮತ್ತು ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಪ್ರಶಸ್ತಿಗಾಗಿ ಅರ್ಜಿ ನಮೂನೆ ಹಾಗೂ ಮಾನದಂಡಗಳನ್ನು ಕಚೇರಿಯ ವೆಬ್‌ಸೈಟ್ ಲಿಂಕ್ http://balavikasaacademy.karnataka.gov.in/ ಗೆ ಭೇಟಿ ನೀಡಿ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಲಕ್ಕಮ್ಮನಹಳ್ಳಿಯ ಕೆಹೆಚ್‌ಬಿ ಕಾಲೋನಿಯ ಚಂದ್ರಕಾ ಲೇಔಟ್ ಹಿಂಭಾಗದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.0836-2461666 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 18 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವಕರಿಗೆ ಮೊಬೈಲ್ ರಿಪೇರಿ, ಸರ್ವಿಸ್, ಎಲೆಕ್ಟಿçಕ್ ಮೋಟರ್ ರಿವೈಂಡಿAಗ್, ರಿಪೇರ್ ಸರ್ವಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆ.16 ರಿಂದ 30 ದಿನಗಳ ಕಾಲ ವಸತಿ ಸಹಿತವಾಗಿ ಉಚಿತ ತರಬೇತಿ ನೀಡಲಾಗುತ್ತದೆ. *ಅರ್ಹತೆಗಳು* ಬಿ.ಪಿ.ಏಲ್. ಕಾರ್ಡ ಹೊಂದಿರಬೇಕು ಕನ್ನಡವನ್ನು ಓದಲು ಹಾಗೂ ಬರೆಯಲು ಬರುವಂತಹ ನಿರುದ್ಯೋಗಿ ಸ್ವ-ಉದ್ಯೋಗ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಹತೆ ಕನಿಷ್ಟ 10ನೇ ತರಗತಿ ಪಾಸಾಗಿರಬೇಕು. ತರಬೇತಿಯ ಬಗ್ಗೆ ಪ್ರಾಥಮಿಕ ಅನುಭವ ಹೊಂದಿದವರಿಗೆ ಆದ್ಯತೆ ಕೊಡಲಾಗುವುದು. 35 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಈ ಮೊದಲು ತರಬೇತಿ ಪಡೆದವರು ಪುನಃ ತರಬೇತಿ ಪಡೆಯಲು ಅರ್ಹರಿರುವುದಿಲ್ಲ. ಆಸಕ್ತ ಅರ್ಹ ಅಭ್ಯರ್ಥಿಗಳು ತ್ವರಿತವಾಗಿ ತಮ್ಮ ಹೆಸರು, ವಿಳಾಸ, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿ, ಸಂಬAಧಿತ ವಿಷಯದಲ್ಲಿ ಇರುವ ಪ್ರಾಥಮಿಕ ಜ್ಞಾನ, ಅನುಭವ ಮುಂತಾದ ಮಾಹಿತಿಯೊಂದಿಗೆ ಬಿಳಿ ಹಾಳೆಯ ಮೇಲೆ ಅರ್ಜಿಯನ್ನು ಬರೆದು ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರದೊಂದಿಗೆ ರೇಷನ್ ಕಾರ್ಡ್ನ ಒಂದು ಝೆರಾಕ್ಸ್ ಪ್ರತಿಯನ್ನು ಲಗತ್ತಿಸಿ ಅರ್ಜಿಯನ್ನು ಆ.14 ರೊಳಗಾಗಿ ಸಲ್ಲಿಸಬೇಕು. ಅರ್ಜಿಗಳು ನಮಗೆ ತಲುಪಿದ ನಂತರ ತರಬೇತಿಯಲ್ಲಿ ಭಾಗವಹಿಸುವ ಬಗೆಗೆ ಅರ್ಜಿಯಲ್ಲಿ ನಮೂದಿಸಿದ ಫೋನ್ ನಂಬರ್‌ಗೆ ಫೋನ್ ಮಾಡಿ ತಿಳಿಸಲಾಗುವುದು. ತರಬೇತಿಯಲ್ಲಿ ಪಾಲ್ಗೊಳ್ಳಲು ತಗುಲುವ ಪ್ರಯಾಣ ಭತ್ಯೆಯನ್ನು ತಾವೇ ಭರಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹತ್ತಿರದ ಡಿಐಸಿ ಕಾಂಪೌAಡ್‌ನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರ ಕಚೇರಿ ಅಥವಾ ದೂ.08392-299117, ಮೊ.8310766951 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. -----------

“ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2023 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಯನ್ನು ನೀಡಲು ಉದ್ದೇಶಿಸಲಾಗಿದ್ದು, ಆಯ್ದ ಪುಸ್ತಕಗಳಿಂದ ಅರ್ಜಿ ಸಲ್ಲಿಸಬಹುದು. ಪುಸ್ತಕಗಳು ಆಯಾ ಸಾಲಿನ ಅವಧಿಯಲ್ಲಿ (ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ) ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, ಮಕ್ಕಳ ಕಾದಂಬರಿ (ಪಠ್ಯಾಧಾರಿತ ಬಿಟ್ಟು), ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶ ಕೃತಿ ಸೇರಿ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಈ ಮೇಲ್ಕಂಡ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಆಗಸ್ಟ್ 26 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು. ಪ್ರಶಸ್ತಿಗಾಗಿ ಮಾನದಂಡಗಳನ್ನು ಕಚೇರಿಯ ವೆಬ್‌ಸೈಟ್ ಲಿಂಕ್ http://balavikasaacademy.karnataka.gov.in/ ಗೆ ಭೇಟಿ ನೀಡಿ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಲಕ್ಕಮ್ಮನಹಳ್ಳಿಯ ಕೆಹೆಚ್‌ಬಿ ಕಾಲೋನಿಯ ಚಂದ್ರಕಾ ಲೇಔಟ್ ಹಿಂಭಾಗದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.0836-2461666 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಜು.31 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಕುಡುತಿನಿ ಉಪ-ಕೇಂದ್ರದ ಆವರಣದಲ್ಲಿನ ಶಿಥಿಲಗೊಂಡ ಜೋಡಿ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯವನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/11ಕೆ.ವಿ ಕುಡುತಿನಿ ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜುವಾಗುವ 11ಕೆ.ವಿ ಮಾರ್ಗಗಳಲ್ಲಿ ಜು.31 ರಂದು ಬೆಳಿಗ್ಗೆ 08 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸÀಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು* ಎಫ್-6 ದರೋಜಿ ಐ.ಪಿ ಮಾರ್ಗದ ಏಳುಬೆಂಚಿ, ಸಿದ್ದಮ್ಮನಹಳ್ಳಿ, ರ‍್ರಂಗಳಿ, ಬಸವಣ್ಣ ಕ್ಯಾಂಪ್, ಭೂಲಕ್ಷಿö್ಮ ಕ್ಯಾಂಪ್ ಕೃಷಿ ಪ್ರದೇಶಗಳು. ಎಫ್-2 ತಿಮ್ಮಲಾಪುರ ಎನ್.ಜೆ.ವೈ ಮಾರ್ಗದ ಸಿದ್ದಮ್ಮನಹಳ್ಳಿ ತಿಮ್ಮಲಾಪುರ, ಏಳುಬೆಂಜಿ, ಬಸವಣ್ಣ ಕ್ಯಾಂಪ್ ಗ್ರಾಮಗಳು. ಎಫ್-3 400 ಕೆಪಿಟಿಸಿಎಲ್ ಮತ್ತು ಬಿಟಿಪಿಎಸ್ ಮಾರ್ಗದ 400 ಕೆವಿಎ ಬಿಪಿಎಸ್ ಕುಡುತಿನಿ. ಎಫ್-4 ಕುಡುತಿನಿ ನಗರ ಮಾರ್ಗದ ಕುಡುತಿನಿ ನಗರ, ವೇಣಿವೀರಾಪುರ ಗ್ರಾಮಗಳು. ಎಫ್-5 ವೇಣಿ ವೀರಾಪುರ ಕೈಗಾರಿಕೆ ಪ್ರದೇಶ ಮಾರ್ಗದ ವೇಣಿ ವೀರಾಪುರ ಕೈಗಾರಿಕೆ ಪ್ರದೇಶ ಸೇರಿದಂತೆ ಇನ್ನೂ ಮುಂತಾದ ಕಡೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಅಂಗವಾಗಿ ಜಿಲ್ಲಾ ಮಟ್ಟದ ಪ್ರತಿಜ್ಞಾ ವಿಧಿ ಸ್ವೀಕಾರ ಜನ ಸಾಮಾನ್ಯರಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತ ಕಾನೂನಿನ ಅರಿವು ಮೂಡಿಸಬೇಕು: ನ್ಯಾ.ರಾಜೇಶ್ ಎನ್.ಹೊಸಮನೆ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಜಗತ್ತಿನಲ್ಲಿ ಮಾದಕ ವಸ್ತು ಸಾಗಾಣಿಕೆ, ಶಸ್ತಾçಸ್ತç ಸಾಗಾಣಿಕೆ ಸೇರಿದಂತೆ ಮೂರನೇ ಅತಿದೊಡ್ಡ ದಂಧೆ ಎಂದರೆ ಮಾನವ ಕಳ್ಳ ಸಾಗಾಣಿಕೆ, ಈ ಕುರಿತು ಜನ ಸಾಮಾನ್ಯರಲ್ಲಿ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ‘ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಅಂಗವಾಗಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಅಪ್ರಾಪ್ತ ಮಕ್ಕಳು, ಮಹಿಳೆಯರು ಸೇರಿದಂತೆ ವ್ಯಕ್ತಿಗಳನ್ನು ಕಳ್ಳ ಸಾಗಾಣಿಕೆ ಮಾಡಿ ಲೈಂಗಿಕ ಶೋಷಣೆ, ಭಿಕ್ಷಾಟನೆ, ಜೀತ, ಬಾಲ ಕಾರ್ಮಿಕರ ಕೆಲಸ, ಅಂಗಾAಗ ಕಸಿ, ಬಾಲ್ಯ ವಿವಾಹ ಮತ್ತು ವೇಶ್ಯೆವಾಟಿಕೆ ಚಟುವಟಿಕೆಗಳಲ್ಲಿ ಬಳಸಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರಲ್ಲಿ ಕಾನೂನು ಮತ್ತು ಶಿಕ್ಷೆ ಬಗ್ಗೆ ಜಾಗೃತಿ ಮೂಡಿಸಿ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು ಎಂದು ಹೇಳಿದರು. ಜನ ಸಾಮಾನ್ಯರಲ್ಲಿ ವಿದೇಶಗಳಿಗೆ ಕರೆದೊಯ್ದು ಕೆಲಸ ಕೊಡಿಸುವ ಆಸೆ ಆಮೀಷ ಒಡ್ಡುವಂತಹ ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕರು ಎಚ್ಚರವಹಿಸಬೇಕು ಎಂದರು. ಲೈಂಗಿಕ ಶೋಷಣೆಗಾಗಿ ಹೆಚ್ಚು ಅಪಹರಣವಾಗುವ ನಿದರ್ಶನಗಳಿದ್ದು, ಬಡತನದಿಂದ ಮುಕ್ತರಾಗಲು ಪೋಷಕರು ತಮ್ಮ ಅಪ್ರಾಪ್ತ ಮಕ್ಕಳನ್ನು ಕೆಲಸಕ್ಕೆ ಕಳುಹಿಸಿದರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ. ಸ್ವಸ್ಥ ಸಮಾಜ ನಿರ್ಮಾಣ ಮಾಡಲು ವಿವಿಧ ಇಲಾಖೆಗಳೊಡನೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ದಂಧೆಯು ಸಮಾಜದ ಕಪ್ಪು ಚುಕ್ಕೆಯಾಗಿ ಪರಿಣಮಿಸಿದ್ದು, ಮಾನವ ಕಳ್ಳ ಸಾಗಾಣಿಕೆಯು ಕಾನೂನು ಬಾಹಿರವಾಗಿದೆ ಎಂದು ಹೇಳಿದರು. ಮಾನವ ಕಳ್ಳ ಸಾಗಾಣಿಕೆಯಿಂದ ಇಂದಿನ ಪೀಳಿಗೆ ಹಾದಿ ತಪ್ಪುತ್ತಿದೆ. ಆರ್ಥಿಕ ಸಮಸ್ಯೆಯಿಂದ ಪೋಷÀಕರು ಸಮಾಜದಲ್ಲಿ ಸ್ವಯಂ ಪ್ರೇರಿತರಾಗಿ ಮಾನವ ಕಳ್ಳ ಸಾಗಾಣಿಕೆಗೆ ಒತ್ತು ನೀಡುತ್ತಿದ್ದಾರೆ. ಸಾಮಾಜಿಕ ಜವಾಬ್ಧಾರಿಯ ಬಗ್ಗೆ ವಿವಿಧ ಇಲಾಖೆಗಳ ಸಂಘಟನಾತ್ಮಕ ಸಹಕಾರದಿಂದ ಪೋಷಕರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಾನವ ಕಳ್ಳಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ “ಕಾವಲು” ಸಮಿತಿ ರಚನೆ ಮಾಡಲಾಗಿದ್ದು, ಸಮಿತಿಯಲ್ಲಿ ತಹಶೀಲ್ದಾರ್, ಗ್ರಾ.ಪಂ ಅಧ್ಯಕ್ಷ, ಗ್ರಾ,ಪಂ ಅಭಿವೃದ್ಧಿ ಅಧಿಕಾರಿ, ಗ್ರಾ,ಪಂ ಕಾರ್ಯದರ್ಶಿ, ಶಾಲಾ ಮುಖ್ಯ ಗುರುಗಳು, ಪೊಲೀಸ್ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆ, ಪ್ರೌಢಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿ ಸೇರಿದಂತೆ ಸ್ತಿçà ಶಕ್ತಿ ಸಂಘದ ಮಹಿಳೆಯನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು. ಇದೇ ವೇಳೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಪ್ರತಿಜ್ಞಾ ವಿಧಿ ಭೋಧಿಸಿದರು. ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ ಎ.ಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮೇಲ್ವಿಚಾರಕರು ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ----------

ರೂಪ್‌ಚಂದ್ ಮೀನು ಸಾಕಾಣಿಕೆ ಮಾಡುವವರು ತಪ್ಪದೇ ಮೀನುಗಾರಿಕೆ ಇಲಾಖೆಯಿಂದ ಅನುಮತಿ ಪಡೆಯಬೇಕು

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ರೂಪ್‌ಚಂದ್ ಮೀನು ಸಾಕಾಣಿಕೆ ಮಾಡಬಯಸುವ ಪ್ರತಿಯೊಬ್ಬ ರೈತರು ಮತ್ತು ಮೀನು ಕೃಷಿಕರು ಮೀನುಗಾರಿಕೆ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ ಅವರು ತಿಳಿಸಿದ್ದಾರೆ. ಜಿಲ್ಲೆಯ ಸಿರುಗುಪ್ಪ, ಕಂಪ್ಲಿ ಮತ್ತು ಕುರುಗೋಡು ತಾಲ್ಲೂಕುಗಳಲ್ಲಿ ಕೆಲವು ವ್ಯಕ್ತಿಗಳು ಸರ್ಕಾರಿ, ಪರಂಪೋಕು ಜಮೀನಿನಲ್ಲಿ ಕೊಳಗಳನ್ನು ನಿರ್ಮಿಸಿಕೊಂಡು ಅನಧಿಕೃತವಾಗಿ ರೂಪ್ ಚಂದ್ ಮೀನು ಸಾಕಾಣಿಕೆ ಮಾಡುತ್ತಿರುವುದು ಮತ್ತು ಕೊಳಗಳಲ್ಲಿ ಚಿಕನ್ ವೇಸ್ಟ್, ಸತ್ತ ಕೋಳಿ, ಕೊಳೆತ ಮೊಟ್ಟೆ, ಇತ್ಯಾದಿ ನಿಷೇಧಿತ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬAದಿದೆ. ಒAದು ವೇಳೆ ಯಾರಾದರೂ ಮೀನು ಕೃಷಿ ಕೊಳಗಳಲ್ಲಿ ನಿಷೇಧಿತ ಆಹಾರ ಪದಾರ್ಥಗಳನ್ನು ರೂಪ್ ಚಂದ್ ಮೀನುಗಳಿಗೆ ಆಹಾರವನ್ನಾಗಿ ಬಳಸುತ್ತಿರುವುದು ಕಂಡುಬAದರೆ ಮೊ.9449593156 ಗೆ ಕರೆ ಮಾಡಿ ತಿಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಮೀನುಗಾರಿಕೆ ಇಲಾಖೆ; ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ ಅವರು ತಿಳಿಸಿದ್ದಾರೆ. ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಡನೆ ವೆಬ್‌ಸೈಟ್ hಣಣಠಿs://bಚಿಟಟಚಿಡಿi.ಟಿiಛಿ.iಟಿ ಗೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ಅಥವಾ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆ ಕಚೇರಿ ಮುಖಾಂತರ ಆನ್‌ಲೈನ್‌ನಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.12 ಕೊನೆಯ ದಿನವಾಗಿದೆ. *ಯೋಜನೆಗಳ ವಿವರ:* ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನು ಕೃಷಿಕರಿಗೆ ರೂ.10 ಸಾವಿರ ವೆಚ್ಚದಲ್ಲಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್‌ಗಳನ್ನು ವಿತರಿಸಲಾಗುವುದು. ಮೀನು ಮಾರುಕಟ್ಟೆಗಳ ನಿರ್ಮಾಣ ಮತ್ತು ಮೀನು ಮಾರಾಟಕ್ಕೆ ಸಹಾಯ ಮತ್ಸö್ಯವಾಹಿನಿ ಯೋಜನೆಯಡಿ ಐಸ್‌ಬಾಕ್ಸ್ನೊಂದಿಗೆ ಮೊಪೆಡ್ ಮತ್ತು ಸೈಕಲ್ ಖರೀದಿಸಲು ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಜು.31 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ನಗರದ ಕೆಲವೆಡೆ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ 11 ಕೆ.ವಿ ಫೀಡರ್ ವ್ಯಾಪ್ತಿಯಿಂದ ಸರಬರಾಜು ಆಗುವ ಪ್ರದೇಶಗಲ್ಲಿ ಜು.31 ರಂದು ಬೆಳಿಗ್ಗೆ 10 ಗಂಟೆಯಿAದ ಮದ್ಯಾಹ್ನ 03 ಗಂಟೆ ವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೊಕ್ ರೆಡ್ಡಿ ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು* ಎಫ್-6 ಫೀಡರ್‌ನ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಎಸ್.ಪಿ ಸರ್ಕಲ್, ಶಾಸ್ತಿçà ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ ಸೇರಿದಂತೆ ಇನ್ನು ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಎಜುಕಾನ್ 2024; ಆ.01, 02 ರಂದು ಎರಡು ದಿನಗಳ ಶೈಕ್ಷಣಿಕ ಸಮಾವೇಶ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ, ತೋರಣಗಲ್ಲು ಜೆಎಸ್‌ಡಬ್ಲೂö್ಯ ಫೌಂಡೇಷನ್ ಇವರ ಸಂಯುಕ್ತಾಶ್ರಯದಲ್ಲಿ ‘ಎಜುಕಾನ್ 2024’ ಎರಡು ದಿನಗಳ ಶೈಕ್ಷಣಿಕ ಸಮಾವೇಶವನ್ನು ಆ.01 ಮತ್ತು 02 ರಂದು ಸಂಡೂರು ತಾಲ್ಲೂಕಿನ ತೋರಣಗಲ್ಲಿನ ವಿದ್ಯಾನಗರದಲ್ಲಿ ಏರ್ಪಡಿಸಲಾಗಿದೆ. ಆ.01 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಅವರು ಉದ್ಘಾಟನೆ ಮಾಡುವರು. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ವಡ್ಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆ.ಎಂ.ನಿAಗಮ್ಮ ನಾಗರಾಜ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಬಿ.ಬಿ.ಕಾವೇರಿ, ಸಮಗ್ರ ಶಿಕ್ಷಣ ರಾಜ್ಯ ಯೋಜನಾ ನಿರ್ದೇಶಕ ಕೆ.ಎನ್.ರಮೇಶ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್.ಎಸ್., ವಿಜಯನಗರ ಮತ್ತು ಸೇಲಂ ವರ್ಕ್ಸ್ ಜೆಎಸ್‌ಡಬ್ಲೂö್ಯನ ಅಧ್ಯಕ್ಷ ಪಿ.ಕೆ.ಮುರುಗನ್, ಜೆಎಸ್‌ಡಬ್ಲೂö್ಯನ ಫೌಂಡೇಶನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿನಿ ಸಕ್ಸೇನಾ, ಡಯಟ್ (ಅಭಿವೃದ್ಧಿ) ಉಪನಿರ್ದೇಶಕರಾದ ಹನುಮಕ್ಕ.ಎ., ಶಾಲಾ ಶಿಕ್ಷಣ ಇಲಾಖೆಯ (ಆಡಳಿತ) ಉಪನಿರ್ದೇಶಕರಾದ ಉಮಾದೇವಿ.ಬಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ----------

ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡುಬAದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ: ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ದೇಹದ ಚರ್ಮದ ಮೇಲೆ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಅಥವಾ ಮುಖದಲ್ಲಿ ಗಂಟುಗಳು, ಕಿವಿಯ ಮೇಲೆ ಗಂಟುಗಳು ಕಂಡುಬAದಲ್ಲಿ ಇವು ಕುಷ್ಠರೋಗದ ಚಿಹ್ನೆಗಳಾಗಿರಬಹುದು. ತಪ್ಪದೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಎಂದು ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ದೇವಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 38ನೇ ವಾರ್ಡ್ನ ಕಾರ್ಕನ ಮಸೀದಿಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೊಸದಾಗಿ ಕುಷ್ಠರೋಗ ಪ್ರಕರಣಗಳಿಗೆ ಉಂಟಾಗುವ ಅಂಗವಿಕಲತೆಯನ್ನು ಕಡಿಮೆ ಮಾಡಲು ಮತ್ತು ಸುಪ್ತ ಕುಷ್ಠರೋಗ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪತ್ತೆ ಹಚ್ಚಲು ಜು.29 ರಿಂದ ಆ.14 ರ ವರೆಗೆ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸ್ವಯಂಸೇವಕರು ಮನೆ ಮನೆ ಭೇಟಿ ನೀಡುವ ಮೂಲಕ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು ಕೋರಿದರು. ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪುರುಷ ಮತ್ತು ಮಹಿಳಾ ಸ್ವಯಂಸೇವಕರು ಮನೆ-ಮನೆ ಭೇಟಿ ಮಾಡಿ ಕುಷ್ಠರೋಗದ ಬಗ್ಗೆ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು. ಮನೆಯಲ್ಲಿರುವ 2 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನು ತಪಾಸಣೆ ಕೈಗೊಂಡು ಶಂಕಿತ ಪ್ರಕರಣಗಳು ಕಂಡುಬAದಲ್ಲಿ ಅವರಿಗೆ ರೆಫರಲ್ ಫಾರಂ ನೀಡಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಒಂದು ವೇಳೆ ಅಗತ್ಯವೆನಿಸಿದರೆ ಜಿಲ್ಲಾ ಆಸ್ಪತ್ರೆ ಹಾಗು ವಿಜಯನಗರ ವೈದೈಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ತಜ್ಞ ವೈದ್ಯರುಗಳ ಹತ್ತಿರ ತಪಾಸಣೆ ಮಾಡಿಸಿಕೊಳ್ಳಲು ಕಳುಹಿಸಲಾಗುವುದು. ಖಚಿತಪಟ್ಟಲ್ಲಿ ರೋಗಿಯ ಮೈಮೇಲೆ ಚಿಹ್ನೆಗಳು ಅಥವಾ ವೈದ್ಯರ ನಿರ್ಧರಿಸಿದಂತೆ 6 ತಿಂಗಳಿನಿAದ 1 ವರ್ಷದ ಚಿಕಿತ್ಸೆಯನ್ನು ನೀಡಲಾಗುವುದು. ಚಿಕಿತ್ಸೆ ಪೂರ್ಣಗೊಂಡಲ್ಲಿ ರೋಗ ಸಂಪೂರ್ಣ ಗುಣವಾಗವುದು ಯಾವುದೇ ಆತಂಕ ಬೇಡ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ್, ವೈಧ್ಯಾಧಿಕಾರಿ ಡಾ.ಸುಧಾರಾಣಿ, ಡಿಎಫ್‌ಐಟಿ ಸಂಯೋಜಕ ಸುಧಾಕರ್, ಕುಷ್ಠರೋಗ ವಿಭಾಗದ ಸುಮನ್, ಮಾನಪ್ಪ, ಎನ್.ಪಂಪಯ್ಯಸ್ವಾಮಿ, ಬಳ್ಳಾರಿ ತಾಲ್ಲೂಕು ಮೇಲ್ವಿಚಾರಕ ಮುಸ್ತಾಕ್ ಅಹಮದ್ ಸೇರಿದಂತೆ ದೇವಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಯವರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಹಾಗೂ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು. ---------

ಕುರೇಕುಪ್ಪ; ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತ ತೃತೀಯ ಲಿಂಗಿ ಫಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಆಸಕ್ತ ಅರ್ಹ ತೃತೀಯ ಲಿಂಗಿ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆ.08 ಕೊನೆಯ ದಿನವಾಗಿರುತ್ತದೆ. *ದಾಖಲೆಗಳು:* ಅರ್ಜಿದಾರರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ನಿವೇಶನದ ಖಾತೆಯ ನಕಲು ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿಯೊಂದಿಗೆ ಪಾಸ್‌ಪೋರ್ಟ್ ಅಳತೆಯ ಫೋಟೋ ಒದಗಿಸಬೇಕು. ತೃತೀಯ ಲಿಂಗಿ ಅರ್ಜಿದಾರರು ಮಾತ್ರ ಅರ್ಹರಾಗಿದ್ದು, ಪುರಸಭೆ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿದ ಖಾಲಿ ನಿವೇಶನದ ಪ್ರಸಕ್ತ ಸಾಲಿನ ನಮೂನೆ-3ರ ನಕಲು ಪ್ರತಿ, ಮುಟೇಶನ್ ಪ್ರತಿ, ಕ್ರಯ ಪತ್ರ, ದಾನ ಪತ್ರದ ನಕಲು, ಪ್ರಸಕ್ತ ಸಾಲಿಗೆ ಇರುವಂತೆ 15 ವರ್ಷದ ಇಸಿ ದಾಖಲೆಗಳ ನಕಲು ಪ್ರತಿಗಳೊಂದಿಗೆ ಅರ್ಜಿ ನಮೂನೆ ನೀಡಬೇಕು. ಒಟ್ಟು 89 ಗುರಿಯನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಕುರೇಕುಪ್ಪ ಪುರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಸೋಮವಾರ, ಜುಲೈ 29, 2024

ಜು.30 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ನಗರದ ಹವಂಭಾವಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬ ಬದಲಾಯಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಜು.30 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ಎಫ್-10 ಫೀಡರ್‌ನ ಅಶೋಕ ನಗರ, ಹವಂಭಾವಿ, ಟಿಎಂಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಜು.30 ರಂದು ಮಾನವ ಕಳ್ಳ ಸಾಗಾಣಿಕೆ ದಿನಾಚರಣೆ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜು.30 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್‌ನ ಹೊಸ ನಜೀರ್‌ಸಾಬ್ ಸಭಾಂಗಣದಲ್ಲಿ ‘ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಅಂಗವಾಗಿ ಪ್ರತಿಜ್ಞಾ ವಿಧಿ ಕೈಗೊಳ್ಳುವ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಅವರು ತಿಳಿಸಿದ್ದಾರೆ. ---------

ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ | ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಬಗ್ಗೆ ಅರಿವು ಮೂಡಿಸಿ: ಎಡಿಸಿ ಮೊಹಮ್ಮದ್ ಝುಬೇರ್ ಸೂಚನೆ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ವ್ಯಸನ ಮುಕ್ತ ದಿನಾಚರಣೆ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು. ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಹಾಗೂ ವ್ಯಸನ ಮುಕ್ತ ಶಿಬಿರ ಕಾರ್ಯಕ್ರಮ ಆಯೋಜಿಸುವ ಸಂಬAಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 01ರಂದು ಬೆಳಿಗ್ಗೆ 10.30 ಕ್ಕೆ ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು. ಶಿಷ್ಟಾಚಾರದನ್ವಯ ಆಹ್ವಾನ ಮುದ್ರಿಸಿ, ಗಣ್ಯರನ್ನು ಆಹ್ವಾನಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಂಗವಾಗಿ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಏರ್ಪಡಿಸಬೇಕು. ಜಾಗೃತಿ ಜಾಥಾವು ಕಾಲೇಜು ಮೈದಾನದಿಂದ ಆರಂಭವಾಗಿ ಸಂಗಮ್ ವೃತ್ತ, ನೂತನ ಜಿಲ್ಲಾಡಳಿತ ಭವನದ ಮುಂಭಾಗದಿAದ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದವರೆಗೆ ನಡೆಸಬೇಕು ಎಂದರು. ಜಾಥಾ ಕಾರ್ಯಕ್ರಮದಲ್ಲಿ ಭಿತ್ತಿಪತ್ರ, ಜಾಗೃತಿ ಘೋಷವಾಕ್ಯಗಳ ಫಲಕಗಳನ್ನು ಪ್ರದರ್ಶಿಸಿ, ಜನರಲ್ಲಿ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಡಾ.ಮಹಾಂತ ಶಿವಯೋಗಿಗಳ ಭಾವಚಿತ್ರವನ್ನು ಅನಾವರಣಗೊಳಿಸಿ ಗೌರವ ಸಲ್ಲಿಸಬೇಕು. ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಬೇಕು ಹಾಗೂ ಸಂಪನ್ಮೂಲ ವ್ಯಕ್ತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು. ಪ್ರತಿ ವರ್ಷ ಆಗಸ್ಟ್ 01 ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ. ಅದರನ್ವಯ ಜಿಲ್ಲಾ ಮಟ್ಟದಲ್ಲಿ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ 01 ರಂದು ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರದಸ ವಿ.ಸಿ.ಗುರುರಾಜ ಸೇರಿದಂತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. -------

ಸ್ವಾತಂತ್ರö್ಯ ದಿನಾಚರಣೆ; ಜು.31 ರಂದು ಪೂರ್ವಭಾವಿ ಸಭೆ

ಬಳ್ಳಾರಿ,ಜು,29(ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ 78 ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸುವ ಸಂಬAಧ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜು.31 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್.ಎನ್ ಅವರು ತಿಳಿಸಿದ್ದಾರೆ. --------

ವಿಶೇಷ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು,29(ಕರ್ನಾಟಕ ವಾರ್ತೆ): ನಗರದ ಕಂಟೋನ್‌ಮೆAಟ್‌ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ ವಿಶೇಷ ಶಿಕ್ಷಕರ 01 ಹುದ್ದೆಗೆ ಬಾಹ್ಯಮೂಲದಿಂದ ಅಂಶಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ವಿದ್ಯಾರ್ಹತೆ (ವಿಶೇಷ ಡಿ.ಇಡಿ, ವಿಶೇಷ ಬಿ.ಇಡಿ) ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನ್ಮದಿನಾಂಕ ಪ್ರಮಾಣ ಪತ್ರ, ಆಧಾರ್‌ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ವಾಸಸ್ಥಳ ಪ್ರಮಾಣ ಪತ್ರ ಸೇರಿ ದೃಢೀಕೃತ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷರ ಕಚೇರಿ ಅಥವಾ ದೂ.08392-297138, ಮೊ.9008485380, 9902106670 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ ವಿದೇಶಿ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಜನಾಂಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು http://kmdconline.karnataka.gov.in/ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಹತೆ: ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಾಗಿರಬೇಕು. ಕೋರ್ಸ್- ಪೂರ್ಣಕಾಲಿಕ ಪದವಿ ಮತ್ತು ಸ್ನಾತಕೋತ್ತರ ಪದವಿ. ವಯಸ್ಸು ಗರಿಷ್ಠ 38 ವರ್ಷ ಮೀರಿರಬಾರದು. ಕುಟುಂಬದ ವಾರ್ಷಿಕ ಆದಾಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.8 ಲಕ್ಷ ಮೀರಬಾರದು. ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ ಶೇ.60 ಅಂಕ ಪಡೆದಿರಬೇಕು. ನಿಗಮಕ್ಕೆ ಆಸ್ತಿಯ (ಕಟ್ಟಡ, ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು. ಅರ್ಜಿಯ ಪ್ರತಿ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಚೇರಿಗೆ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್‌ನ ವಿಜಯನಗರ ಕಾಲೋನಿಯ ನಳಂದ ಕಾಲೇಜ್ ಪಕ್ಕದಲ್ಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಮೊ.8277944207 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಡೆಂಗ್ಯೂ ನಿಯಂತ್ರಣಕ್ಕೆ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಡೆಂಗ್ಯೂ ರೋಗ ನಿಯಂತ್ರಣಕ್ಕೆ ಬಳಕೆಗಾಗಿ ನೀರು ತುಂಬುವ ಪರಿಕರಗಳಲ್ಲಿ ಶುಚಿತ್ವ ಕಾಪಾಡಬೇಕು. ಡೆಂಗ್ಯು ಹರಡುವ ಸೊಳ್ಳೆ ನೀರಿನ ಮೇಲೆ ಮೊಟ್ಟೆ ಇಡದಂತೆ ಮತ್ತು ಸೊಳ್ಳೆ ಲಾರ್ವಾ ಉತ್ಪತ್ತಿ ತಡೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಿರ್ಮೂಲನಾ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾದ ಸಮೀಕ್ಷೆ ಹಿನ್ನಲೆ ಅನಂತಪುರ ರಸ್ತೆಯ ಸಮೀಕ್ಷಾ ಸಮಯದಲ್ಲಿ ಭಾಗಿಯಾಗಿ ಪರಿಶೀಲನೆ ಕೈಗೊಂಡು ಅವರು ಮಾತನಾಡಿದರು. ಡೆಂಗ್ಯು ವೈರಾಣು ಹೊಂದಿದ ಸೋಂಕಿತ ಈಡೀಸ್ ಇಜಿಪ್ಟೆöÊ ಎಂಬ ಸೊಳ್ಳೆಯು ಕಚ್ಚಿದಾಗ ಡೆಂಗ್ಯೂ ರೋಗ ವ್ಯಕ್ತಿಯಲ್ಲಿ ಕಂಡುಬರುವ ಹಿನ್ನಲೆಯಲ್ಲಿ ಸಾರ್ವಜನಿಕರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ತಂಡದ ಸಿಬ್ಬಂದಿಯವರು ಮನೆ ಭೇಟಿ ಮಾಡಿದಾಗ ಬಳಕೆಗಾಗಿ ನೀರು ತುಂಬುವ ಡ್ರಮ್ ಬ್ಯಾರೆಲ್, ಸಿಮೆಂಟ್ ತೊಟ್ಟಿ, ಮುಂತಾದವುಗಳನ್ನು ವಾರಕ್ಕೊಮ್ಮೆ ನೀರು ಖಾಲಿ ಮಾಡಿ, ಸ್ವಚ್ಛಗೊಳಿಸಬೇಕು. ನೀರು ತುಂಬಿದ ನಂತರ ಮುಚ್ಚಳ ಮುಚ್ಚುವ ಇಲ್ಲವೇ, ಬಟ್ಟೆಯನ್ನು ಕಟ್ಟಬೇಕು ಎಂದು ತಿಳಿಸಿದರು. ಈಗಾಗಲೇ ಜಿಲ್ಲಾ ಡಳಿತ ನೀಡಿರುವÀ ಅಗತ್ಯ ಸಲಹೆ ಸೂಚನೆಗಳ ಅನ್ವಯ ವೈದ್ಯಕಿಯ ತಂಡಗಳು ನರ್ಸಿಂಗ್ ವಿದ್ಯಾರ್ಥಿಗಳ ಮೂಲಕ ತಂಡ ರಚಿಸಿ ಪ್ರತಿ ತಂಡಕ್ಕೆ 100 ಮನೆಯಂತೆ ಸಮೀಕ್ಷೆ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ನೀಡುವ ಕಾರ್ಯ ನಡೆಯುತ್ತಿದೆ ಎಂದರು. ಕೇವಲ ಮನೆಗಳಲ್ಲಿ ಮಾತ್ರವಲ್ಲದೇ ಶಾಲೆ, ಅಂಗನವಾಡಿಗಳು, ವಾಣಿಜ್ಯ ಮಳಿಗೆಗಳಲ್ಲಿ ನೀರು ಸಂಗ್ರಹಾರಕಗಳನ್ನು ಪರಿಶೀಲಿಸಿ, ಲಾರ್ವಾ ಕಂಡುಬAದಲ್ಲಿ ಟೆಮೋಫಾಸ್ ದ್ರಾವಣವನ್ನು ಬಳಕೆಗಾಗಿ ನೀರು ತುಂಬುವ ಪರಿಕರಗಳಿಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಹಾಕಲು ಸೂಚಿಸಿಲಾಗಿದೆ ಎಂದರು. ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆ ಇದಾಗಿರುವುದರಿಂದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವ ಮಕ್ಕಳು, ವಯೋವೃದ್ದರು, ಗರ್ಭಿಣಿಯರು ಸೇರಿದಂತೆ ಇತರರು ಮೈತುಂಬ ಬಟ್ಟೆ ಧರಿಸಬೇಕು. ಅಗತ್ಯವೆನಿಸಿದರೆ ಸೊಳ್ಳೆ ಪರದೆ ಬಳಸಲು ಸೂಚಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧ ದಾಸ್ತಾನು ಲಭ್ಯವಿದ್ದು, ಕುಟುಂಬದ ಸದಸ್ಯರಲ್ಲಿ ಯಾರಿಗಾದರೂ ಜ್ವರ ಕಂಡು ಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದು ತಿಳಿಸಿದರು. ಈ ವೇಳೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕೀಟಶಾಸ್ತçಜ್ಞೆ ಡಾ.ನಂದಾ ಕಡಿ, ಡಾ.ಶರತ್ ಸೇರಿದಂತೆ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು. ---------

ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್‌ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಹಾಗೂ ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (Para Legal Volunteers) ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುತ್ತದೆ. ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದುಕೊಂಡು, ಭರ್ತಿಮಾಡಿ ಆಗಸ್ಟ್ 09 ಸಂಜೆ 5.30 ರೊಳಗಾಗಿ ಖುದ್ದಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ; 60 ದಿನಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಚರ್ಮಗಾರಿಕೆಯಲ್ಲಿ ತೊಡಗಿರುವ ಕುಟುಂಬಗಳ ಯುವ ಜನರಿಗೆ (ಪರಿಶಿಷ್ಟ ಜಾತಿಯಡಿ ಬರುವ ಮಾದಿಗ, ಸಮಗಾರ, ಡೋರ, ಆದಿ ಜಾಂಬವ, ಮಚಗಾರ, ಮೋಚಿ ಹಾಗೂ ಇತರೆ ಚರ್ಮಗಾರಿಕೆಗೆ ಒಳಪಡುವ ಸಮುದಾಯಗಳಿಗೆ) ಯುವಕ ಮತ್ತು ಯುವತಿಯರಿಂದ 60 ದಿನಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಚರ್ಮ ಉದ್ಯಮದಲ್ಲಿ ಚಾಲ್ತಿಯಲ್ಲಿರುವ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳನ್ನು ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ಆಗ್ರಾ, ಉತ್ತರಪ್ರದೇಶ, ಕೊಲ್ಕತ್ತ ಹಾಗೂ ಪಶ್ಚಿಮ ಬಂಗಾಳದ ರಾಜ್ಯಗಳಲ್ಲಿರುವ ಮೆ.ಸೆಂಟ್ರಲ್ ಪುಟ್ ವೇರ್ ಟ್ರೆöÊನಿಂಗ್ ಇನ್‌ಸ್ಟಿಟ್ಯೂಟ್ ಸೆಂಟರ್ ಇಲ್ಲಿ “ಫುಟ್‌ವೇರ್ ಡಿಸೈನಿಂಗ್ ಅಂಡ್ ಪ್ರೊಡಕ್ಷನ್” ತರಬೇತಿ ಪಡೆಯಲು ಕಳುಹಿಸಿಕೊಡಲಾಗುತ್ತದೆ. ತರಬೇತಿ ಹೊಂದಲು ಆಸಕ್ತಿ ಇರುವ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. *ಅರ್ಹತೆ:* ವಯೋಮಿತಿ 18 ರಿಂದ 40 ವರ್ಷ ತುಂಬಿರಬೇಕು. ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು. *ಬೇಕಾದ ದಾಖಲೆ:* ವೈಯಕ್ತಿಕ ವಿವರ, 10 ನೇ ತರಗತಿಯಲ್ಲಿ ತೇರ್ಗಡೆ ಹೊಂದಿರುವ ಅಂಕಪಟ್ಟಿ., ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಮೊದಲನೇ ಪ್ರತಿ ಹಾಗೂ 05 ಪಾಸ್ ಫೋಟೋ. ಅರ್ಜಿ ಸಲ್ಲಿಸಲು ಆಗಸ್ಟ್ 05 ಕೊನೆಯ ದಿನವಾಗಿರುತ್ತದೆ. ಅರ್ಜಿಗಳನ್ನು ಆಫ್‌ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆಯನ್ನು ಮೋತಿ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ನ ಶಾಪ್ ನಂ.24, ಗ್ರೌಂಡ್ ಪ್ಲೋರ್‌ನ ಲಿಡ್‌ಕರ್ ಲೆದರ್ ಎಂಪೋರಿಯA ಮಳಿಗೆಯಲ್ಲಿ ಪಡೆದು ಭರ್ತಿ ಮಾಡಿ, ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-271741 ಹಾಗೂ ಮೊ.8660667128, 9844667691 ಗೆ ಸಂಪರ್ಕಿಸಬಹುದು ಎಂದು ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕ ಟಿ.ಸಂಜೀವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಸೆ.14 ರಂದು ರಾಷ್ಟಿçÃಯ ಲೋಕ ಅದಾಲತ್

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಸೆ.14 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟಿçÃಯ ಲೋಕ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಸೆ.14 ರಂದು ನಡೆಯುವ ಮೆಗಾ-ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ ಜು.29(ಕರ್ನಾಟಕ ವಾರ್ತೆ): ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬಳ್ಳಾರಿ ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದ ಬಸವಣ್ಣ ಗುಡಿ ಹತ್ತಿರದ ನಿವಾಸಿಯಾದ ಎಸ್.ಬಿ.ದೊಡ್ಡನಗೌಡ ಎನ್ನುವ 67 ವರ್ಷದ ವ್ಯಕ್ತಿ ಜು.23 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ ಗುರುತು: ಎತ್ತರ 5.9 ಅಡಿ, ಕೋಲು ಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ತಲೆಯಲ್ಲಿ ಕಪ್ಪು ಮಿಶ್ರಿತ ಬಿಳಿ ಕೂದಲು, ಬಿಳಿ ಮೀಸೆ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಪಂಚೆ ಮತ್ತು ಮೆರೊನ್ ರೆಡ್ ಬಣ್ಣದ ಪುಲ್ ಶರ್ಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೊಲ್ ರೂಂ ಸಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಶನಿವಾರ, ಜುಲೈ 27, 2024

ವಿಎಸ್‌ಕೆ ವಿಶ್ವ ವಿದ್ಯಾಲಯದ 15 ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾಮಿ ನಿರ್ಭಯಾನಂದ ಸರಸ್ವತಿ | ವಿದ್ಯಾರ್ಥಿಗಳು ತಮ್ಮ ಜ್ಞಾನದ ಶಕ್ತಿಯನ್ನು ಅರಿಯಬೇಕು

ಬಳ್ಳಾರಿ,ಜು.26(ಕರ್ನಾಟಕ ವಾರ್ತೆ): ಇಂದಿನ ಪೀಳಿಗೆಯ ವಿದ್ಯಾರ್ಥಿಗಳು ತಮ್ಮಲ್ಲಿರುವ ಅಗಾಧ ಜ್ಞಾನದ ಶಕ್ತಿಯನ್ನು ಅರಿತುಕೊಂಡರೆ ಮಾತ್ರ ತಾವು ಅಂದುಕೊAಡಿದ್ದನ್ನು ಸಾಧಿಸಬಹುದು ಎಂದು ಗದಗ ಮತ್ತು ವಿಜಯನಗರ ಜಿಲ್ಲೆಯ ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ಹೇಳಿದರು. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮAದಿರ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನ-2024 ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಯಾರೂ ಅಶಕ್ತರಲ್ಲ, ತಮ್ಮನ್ನು ತಾವು ಕೀಳರಿಮೆ ಮನೋಭಾವನೆಯಿಂದ ಚಿಂತಿಸುತ್ತಿದ್ದಾರೆ. ಇದರಿಂದ ತಮ್ಮ ಗುರಿಯನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಸ್ವಾಮಿವಿವೇಕಾನಂದರ ಶಕ್ತಿಯೇ ಜೀವನ, ದೌರ್ಬಲ್ಯವೇ ಮರಣ ಎಂಬ ನಾಣ್ನುಡಿಯಂತೆ, ವಿದ್ಯಾರ್ಥಿಗಳು ತಮ್ಮ ಜ್ಞಾನದ ಶಕ್ತಿಯನ್ನು ಅರಿತು ನನ್ನಿಂದ ಸಾಧ್ಯವಿದೆ ಎಂಬ ಭಾವನೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ನಿರಂತರ ಬೆರೆತಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ವಿದೇಶಗಳಲ್ಲಿ ಭಾರತ ದೇಶದ ಶಿಕ್ಷಣಾವಸ್ಥೆಗೆ ಉನ್ನತ ಸ್ಥಾನವಿದೆ. ಪಾಶ್ಚö್ಯತರ ಆಗಮನಕ್ಕಿಂತ ಹಿಂದೆಯೇ ಭಾರತ ದೇಶದಲ್ಲಿ ಶಿಕ್ಷಣವು ಉನ್ನತ ಮಟ್ಟದಲ್ಲಿತ್ತು. ದೇಶದಲ್ಲಿ ನವ ಪ್ರತಿಭೆಗಳಿಗೆ ಕೊರತೆಯಿಲ್ಲ. ಜಗತ್ತಿಗೆ ವಿಶ್ವವಿದ್ಯಾಲಯಗಳು ಹೇಗೆ ಇರಬೇಕು ಎಂಬುದನ್ನು ತಿಳಿಸಿಕೊಟ್ಟ ದೇಶ ಎಂದರೆ ಅದು ಭಾರತ ದೇಶವಾಗಿದೆ ಎಂದರು. ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಜೀವನ ರೂಪಿಸಿಕೊಟ್ಟಂತಹ ಪವಿತ್ರ ಸ್ಥಳಗಳು, ಓದು ಕಲಿತು ಉನ್ನತ ಸ್ಥಾನದಲ್ಲಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಗುರುಗಳನ್ನು ಪ್ರೀತಿಸುವ ಗುಣ ಅಳವಡಿಸಿಕೊಳ್ಳಬೇಕು. ಅವರ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯುತ್ತದೆ. ಗುರುಗಳು ಹೇಳಿದ ಗುರುವಾಕ್ಯದಲ್ಲಿ ಶ್ರದ್ಧೆ ವಹಿಸಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಸಮಾಜದಲ್ಲಿ ಅಭಿವೃದ್ಧಿ ಹೊಂದುತ್ತಾರೆ ಎಂದರು. ವಿಎಸ್‌ಕೆ ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್.ಎಸ್.ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಗುಲಬರ್ಗಾ ವಿಶ್ವವಿದ್ಯಾಲಯದಿಂದ ಹೊರಬಂದು, ಇಂದಿಗೆ 14 ವರ್ಷ ತುಂಬಿ, 15 ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ವಿಶ್ವವಿದ್ಯಾಲಯದಲ್ಲಿ ಗುಣಮಟ್ಟದ ಭೋದನೆ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಪ್ರಥಮದಲ್ಲಿ ಕೇವಲ 4 ವಿಭಾಗಗಳ ಮೂಲಕ ಪ್ರಾರಂಭಗೊAಡ ವಿಶ್ವವಿದ್ಯಾಲಯವು ಪ್ರಸ್ತುತ 29 ವಿಭಾಗಗಳನ್ನು ಒಳಗೊಂಡಿದ್ದು, ಇನ್ನು ಹಲವಾರು ವಿಭಿನ್ನ ವಿಷಯಗಳನ್ನು ಕಲ್ಪಿಸಲಾಗುವುದು. ವಿಶ್ವವಿದ್ಯಾಲಯದ ಆವರಣದಲ್ಲಿ ಹಸರೀಕರಣಕ್ಕೆ ಒತ್ತು ನೀಡಲಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ವಿಶ್ವವಿದ್ಯಾಲಯವು ಉನ್ನತ ಮಟ್ಟಕ್ಕೆ ಬೆಳೆಯಲಿದೆ ಎಂದು ಹೇಳಿದರು. ವಿಎಸ್‌ಕೆ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ತಿಪ್ಪೇರುದ್ರಪ್ಪ ಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವಸತಿನಿಲಯಗಳ ನಾಮಕರಣ, ವಿವಿಧ ಸೌಲಭ್ಯಗಳನ್ನೊಳಗೊಂಡ ಕಟ್ಟಡಗಳನ್ನು ವಿದ್ಯುಕ್ತವಾಗಿ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ, ವಿಜಯಪುರ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ತುಳಸಿಮಾಲ ಬಿ.ಕೆ., ಹಾವೇರಿಯ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಭಾಸ್ಕರ್ ಟಿ.ಎಮ್ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ಮಂಜಪ್ಪ ಡಿ.ಹೊಸಮನೆ, ಪ್ರೊ.ಎಮ್.ಎಸ್.ಸುಭಾಷ್, ಕುಲಸಚಿವ(ಮೌಲ್ಯಮಾಪನ) ಪ್ರೊ.ರಮೇಶ್ ಓ.ಓಲೇಕಾರ, ವಿತ್ತಾಧಿಕಾರಿ ನಾಗರಾಜ ಸೇರಿದಂತೆ ವಿಶ್ವವಿದ್ಯಾಲಯದ ಮಾಜಿ ಕುಲಸಚಿವರುಗಳು, ಕುಲಸಚಿವರು(ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು ಹಾಗೂ ವಿವಿಯ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ----------

ಶುಕ್ರವಾರ, ಜುಲೈ 26, 2024

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ | ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

ಬಳ್ಳಾರಿ,ಜು.26(ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಅವರು ಇಂದು, ಕಂಪ್ಲಿಯ ಕೋಟೆ ಪ್ರದೇಶದ ಬಳಿಯ ಪ್ರವಾಹ ಹಿನ್ನಲೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಗುರುವಾರ ಸಂಜೆ ಸಾಕಷ್ಟು ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕು ನದಿಭಾಗ ಗ್ರಾಮದ ಜನರು ನದಿಪಾತ್ರಕ್ಕೆ ತೆರಳಬಾರದು ಎಂದು ಅವರು ಹೇಳಿದರು. ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು. ಕಂಪ್ಲಿ ಮತ್ತು ಗಂಗಾವತಿ ಸಂಪರ್ಕ ಸಂಚಾರ ನಿರ್ಬಂಧಿಸಿದ್ದು, ಪರ್ಯಾಯವಾಗಿ ಬುಕ್ಕಸಾಗರ ಸೇತುವೆ ಮೂಲಕ ಸಂಚರಿಸಬಹುದು ಎಂದರು. ನೂತನ ಸೇತುವೆ ನಿರ್ಮಾಣದ ಕುರಿತು ಸ್ಥಳೀಯ ಶಾಸಕರ ಜೊತೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಕಂಪ್ಲಿಯಲ್ಲಿ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಊಟ, ವಸತಿ ಸೇರಿದಂತೆ ಮೂಲಭೂತ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಪಂ ವಾರು ನೋಡೆಲ್ ಅಧಿಕಾರಿಗಳನ್ನು ನೇಮಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನದಿಪಾತ್ರದ ಬಳಿ ಪೊಲೀಸರನ್ನು ನಿಯೋಜಿಸಿದೆ. ಯಾರೂ ನದಿಪಾತ್ರಕ್ಕೆ ತೆರಳಬಾರದು. ತುರ್ತು ಸಂದರ್ಭಕ್ಕೆ ತಾಲ್ಲೂಕು ಆಡಳಿತ ಅಥವಾ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು ತಿಳಿಸಿದರು. ಸುರಕ್ಷಿತ ಸ್ಥಳಕ್ಕೆ ತೆರಳಲು ಮನವಿ: ನದಿ ಪಾತ್ರ, ದಂಡೆ ಮತ್ತು ನದಿಯ ಅಸುಪಾಸಿನಲ್ಲಿ ವಾಸಿಸುವ ಗ್ರಾಮಗಳ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ಜತನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. ಬಳಿಕ ಕಂಪ್ಲಿ ಪಟ್ಟಣದಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಡಿವೈಎಸ್ಪಿ ಗೋಖಲೆ, ತಹಶೀಲ್ದಾರ ಶಿವರಾಜ್, ಕಂಪ್ಲಿ ಪುರಸಭೆ ಮುಖ್ಯಾಧಿಕಾರಿ ದುರುಗಣ್ಣ ಸೇರಿದಂತೆ ಇತರರು ಇದ್ದರು. (ಫೋಟೋ ಕಳುಹಿಸಲಾಗಿದೆ) -------

ಯುವ ಜನತೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ: ಸಿದ್ದರಾಜು.ಸಿ

ಬಳ್ಳಾರಿ,ಜು.26(ಕರ್ನಾಟಕ ವಾರ್ತೆ) ಇಂದಿನ ಯುವ ಪೀಳಿಗೆಯು ಸ್ವಯ ಪ್ರೇರಿತರಾಗಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಿ, ಉತ್ತಮ ಆರೋಗ್ಯವನ್ನು ರೂಪಿಸಿಕೊಳ್ಳಬೇಕು ಎಂದು ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಚಂದ್ರಪ್ಪ ಅವರು ಹೇಳಿದರು. ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 15ನೇ ಸಂಸ್ಥಾಪನಾ ದಿನ-2024ರ ಪೂರ್ವ ದಿನದಂದು ಬಳ್ಳಾರಿ ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿವಿಯ ರಾಷ್ಟಿçÃಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಕಲ್ಯಾಣ ಘಟಕ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ಸ್ವಯಂ ರಕ್ತದಾನ ಶಿಬಿರ ಹಾಗೂ ಆರೋಗ್ಯ ತಪಾಸಣೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಕ್ತದಾನಕ್ಕಿಂತ ಶ್ರೇಷ್ಟ ದಾನ ಮತ್ತೊಂದಿಲ್ಲ, ಮಾನವಿಯತೆಗಾಗಿ ರಕ್ತದಾನ ಮಾಡಿದಲ್ಲಿ ನಮ್ಮಲ್ಲಿ ನವಚೈತನ್ಯ ಹುಟ್ಟುತ್ತದೆ ಹಾಗೂ ರಕ್ತದಾನವು ಮತೊಬ್ಬರ ಜೀವವನ್ನು ಉಳಿಸುತ್ತದೆ. ಒಬ್ಬ ವ್ಯಕ್ತಿ ಮಾಡಬಹುದಾಗಿದೆ ಎಂದು ಹೇಳಿದರು. ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಮಾತನಾಡಿ, ಇಂದಿನ ದಿನಗಳಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಶಸ್ತç ಚಿಕಿತ್ಸೆ, ಮಹಿಳೆ ಹಾಗೂ ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವ ರೋಗಿಗಳಿಗೆ ಅವಶ್ಯಕವಾಗಿದೆ ಎಂದರು. ವಿವಿಯ ಕುಲಸಚಿವರಾದ ರುದ್ರೇಶ್ ಎಸ್.ಎನ್ ಅವರು ಮಾತನಾಡಿ, ಕಾಲಕಾಲಕ್ಕೆ ರಕ್ತದಾನ ಮಾಡುವುದರಿಂದ ಆರೋಗ್ಯ ಸಮತೋಲನವಾಗಿರಲು ಸಹಾಯಕವಾಗುತ್ತದೆ ಎಂದರು. ವಿವಿಯ ಕುಲಪತಿಗಳಾದ ಪ್ರೊ.ತಿಪ್ಪೇರುದ್ರಪ್ಪ ಜೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ರಕ್ತವು ಮನುಷ್ಯರ ದೇಹದಲ್ಲಿ ಉತ್ಪತ್ತಿಯಾಗುವ ಸಂಪನ್ಮೂಲವಾಗಿದೆ. ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಅದಕ್ಕಾಗಿ ರಕ್ತದಾನ ಮಹಾದಾನ ಎಂದು ಕರೆಯುತ್ತೇವೆ ಎಂದರು. ವಿವಿಯ ಎಲ್ಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಸೇರಿದಂತೆ 150ಕ್ಕೂ ಹೆಚ್ಚು ರಕ್ತದಾನಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ. ರಮೇಶ್ ಓ ಓಲೇಕಾರ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಬಸರೆಡ್ಡಿ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಂ.ಎ.ಶಕೀಬ್, ವಿದ್ಯಾರ್ಥಿ ಕಲ್ಯಾಣ ಘಟಕದ ನಿರ್ದೇಶಕ ಡಾ.ಶಶಿಕಾಂತ ಮಜಗಿ, ರಾಷ್ಟಿçÃಯ ಸೇವಾಯೋಜನೆಯ ಸಂಯೋಜಕ ಡಾ.ಕುಮಾರ, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಡಾ.ಶಶಿಧರ ಕೆಲ್ಲೂರ, ವಿವಿಯ ಯುವ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ.ರಾಜೇಂದ್ರ ಪ್ರಸಾದ್ ಸೇರಿದಂತೆ ವಿವಿಯ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ----------

ಜು.29 ರಂದು ‘ವಿಶ್ವ ಹೆಪಟೈಟಿಸ್ ದಿನಾಚರಣೆ’: ಜಾಗೃತಿ ಜಾಥ

ಬಳ್ಳಾರಿ,ಜು.26(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಇವರ ವತಿಯಿಂದ ‘ವಿಶ್ವ ಹೆಪಟೈಟಿಸ್ ದಿನಾಚರಣೆ’ ಅಂಗವಾಗಿ ಹೆಪಟೈಟಿಸ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜು.29 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ ಅವರು ತಿಳಿಸಿದ್ದಾರೆ. ಜಾಗೃತಿ ಜಾಥಾವು ಜಿಲ್ಲಾ ಆಸ್ಪತ್ರೆಯ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದವರೆಗೆ ಸಾಗಿ ಮರಳಿ ಜಿಲ್ಲಾ ಅಸ್ಪತ್ರೆ ಆವರಣದವರೆಗೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ----------

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.26(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಐಎಎಸ್ ಮತ್ತು ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತ ಆಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್‌ನ https://sevasindhuservices.karnataka.gov.in ಗೆ ಭೇಟಿ ನೀಡಿ ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅಧಿಸೂಚನೆ ಮತ್ತು ವಿವರಗಳಿಗಾಗಿ ವೆಬ್‌ಸೈಟ್ http://dom.karnataka.gov.in ಗೆ ಭೇಟಿ ನೀಡಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ನಗರದ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ತರಬೇತಿಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲನಾ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜು.26(ಕರ್ನಾಟಕ ವಾರ್ತೆ): ನಗರದ ಬೆಂಗಳೂರು ರಸ್ತೆಯ ಎಪಿಎಂಸಿ ಗೇಟ್ ಬಳಿಯ ಸಿಟಿ ಬಸ್ ನಿಲ್ದಾಣದಲ್ಲಿ ಅಂದಾಜು 45-50 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದು, ಜು.24 ರಂದು ಮೃತ ಪಟ್ಟಿದ್ದು, ಮೃತನ ವಾರಸುದಾರರ ಪತ್ತೆಗೆ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ. ಮೃತನ ಚಹರೆ: ಎತ್ತರ ಅಂದಾಜು 5.5 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಅಂದಾಜು 1 ಇಂಚು ಉದ್ದದ ಕಪ್ಪು ಬಣ್ಣದ ಕೂದಲು, ಅರ್ಧ ಇಂಚು ಉದ್ದದ ಕಪ್ಪು ಮಿಶ್ರಿತ ಬಿಳಿ ಮೀಸೆ ಮತ್ತು 2 ಇಂಚು ಉದ್ದದ ಕಪ್ಪು ಮಿಶ್ರಿತ ಬಿಳಿ ಗಡ್ಡ ಇರುತ್ತದೆ. ಮೃತನ ಬಲ ಮುಂಗೈ ಮೇಲೆ ಆಂಗ್ಲ ಭಾಷೆಯಲ್ಲಿ ‘ರುಕ್ಮಿಣಿ’, ಎಡಕೈ ಮೇಲೆ ಹಿಂದಿ ಭಾಷೆಯಲ್ಲಿ ‘ಯಾಸಿಮಾ’ ಎಂದು ಅಚ್ಚೆ ಹಾಕಿಸಿಕೊಂಡಿರುತ್ತಾನೆ. ಮೃತನ ಮೈಮೇಲೆ ಮಾಸಿದ ನಸಿ ಬಣ್ಣದ ತುಂಬು ತೋಳಿನ ಟಿ-ಶರ್ಟ್, ಅದರ ಮೇಲೆ ಬಿಳಿ, ಆರೆಂಜ್ ಮತ್ತು ಕಪ್ಪು ನೀಲಿ ಬಣ್ಣದ ಟಿ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹೊಂದಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ---------

ಡೆಂಘಿ; ಎಲ್ಲಾ ಡಿಸಿ,ಜಿಪಂ ಸಿಇಒಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಂವಾದ ಸಭೆ | ಡೆಂಘಿ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ

ಬಳ್ಳಾರಿ,ಜು.26(ಕರ್ನಾಟಕ ವಾರ್ತೆ): ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಡೆಂಘಿ ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಅವರಿಗೆ ಸೂಚಿಸಿದರು. ಅವರು, ಗುರುವಾರದಂದು ಡೆಂಘಿ ಜ್ವರ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಬೆಂಗಳೂರಿನ ತಮ್ಮ ಕಚೇರಿಯಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಅವರು ಮಾತನಾಡಿದರು. ಡೆಂಘಿ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘಿ ಪ್ರಕರಣ ಕಂಡುಬAದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು ಮತ್ತು ಆ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ತಿಳಿಸಿದರು. ಮನೆ ಸುತ್ತ ಮುತ್ತ ಸ್ವಚ್ಛತೆ ಕೈಗೊಳ್ಳುವಂತೆ ತಿಳಿಸಬೇಕು. ಮನೆ ಆವರಣ, ಹಿಂಭಾಗ ಮಳೆ ನೀರು ನಿಲ್ಲದಂತೆ ಎಚ್ಚರವಹಿಸಲು, ನೀರು ಬಳಸುವ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವಂತೆ ಸೂಚಿಸಬೇಕು. ಗ್ರಾಮಗಳ ಜಾನುವಾರು ಕುಡಿಯುವ ನೀರಿನ ಸಂಗ್ರಹ ತೊಟ್ಟಿಗಳನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು. ಸೊಳ್ಳೆ ಲಾರ್ವಾ ಉತ್ಪತ್ತಿಯಾಗದಂತೆ ವಾರಕ್ಕೊಮ್ಮೆ ಮನೆ ಭೇಟಿ ನಡೆಸಿ, ಲಾರ್ವಾ ಸಮೀಕ್ಷೆ, ಜಾಗ್ರತೆ ಮತ್ತು ಅಗತ್ಯ ಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಅದನ್ನು ಮೇಲ್ವಿಚಾರಣೆ ನಡೆಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು. ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತ ರಂದೀಪ್.ಡಿ ಹಾಗೂ ಅನೇಕರು ಇದ್ದರು. ಬಳಿಕ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಡೆಂಘಿ ನಿಯಂತ್ರಣದಲ್ಲಿದ್ದು, ಇನ್ನು ಹೆಚ್ಚು ಹೆಚ್ಚು ಮಾದರಿ ಪರೀಕ್ಷೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಇರಿಸಿಕೊಳ್ಳಬೇಕು. ಕುಡಿಯುವ ನೀರು ಕಲುಷಿತಗೊಳ್ಳದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕೀಟ ಶಾಸ್ತçಜ್ಞೆ ಡಾ.ನಂದಾಕಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು. ---------