ಮಂಗಳವಾರ, ಜುಲೈ 30, 2024
ಆ.01 ರಂದು ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ
ಬಳ್ಳಾರಿ,ಜು.30(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಆ.01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಲಾಗಿದೆ.
ವಸತಿ ಮತ್ತು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜಡ್ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಎಸ್‌ಜಿಟಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಸವರಾಜ ಅಮಾತಿ ಅವರು ವಿಶೇಷ ಉಪನ್ಯಾಸ ನೀಡುವರು.
ಬಳ್ಳಾರಿಯ ಸಂಗೀತ ಶಿಕ್ಷಕರಾದ ಕೆ.ದೊಡ್ಡಬಸವ ಗವಾಯಿ ಅವರಿಂದ ವಚನ ಗಾಯನ ಕಾರ್ಯಕ್ರಮ ಇರಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಮುಂತಾದ ಗಣ್ಯರು ಪಾಲ್ಗೊಳ್ಳುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ತುಕಾರಾಂ ರಾವ್ ಬಿ.ವಿ ಅವರು ತಿಳಿಸಿದ್ದಾರೆ.
*ಜಾಗೃತಿ ಜಾಥ:* ಅಂದು ಬೆಳಿಗ್ಗೆ 09.30 ಗಂಟೆಗೆ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿನ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದ ಸಭಾಂಗಣದವರೆಗೆ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಲಿದೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ