ಶುಕ್ರವಾರ, ಜುಲೈ 5, 2024
ಜು.06 ರಂದು ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮ
ಬಳ್ಳಾರಿ,ಜು.05(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ಹಾಗೂ ವಿಕಲಚೇತನರ ತ್ರಿಚಕ್ರ ವಾಹನಗಳು ಮತ್ತು ಪೋಷಣ್ ಅಭಿಯಾನ ಯೋಜನೆಯಡಿ ಸ್ಮಾರ್ಟ್‍ಫೋನ್ ಮತ್ತು ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಜುಲೈ 06 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸ್ಟೇಡಿಯಂ ರಸ್ತೆಯ ವಾಲ್ಮೀಕಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳಕರ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು.
ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತಿ ಇರುವರು.
ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ ಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಡಾ.ಜೆ.ಸಿ.ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆಯ ನಿರ್ದೇಶಕ ಎನ್.ಸಿದ್ದೇಶ್ವರ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಉಪಸ್ಥಿತರಿರುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್ ಅವರು ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ