ಗುರುವಾರ, ಜುಲೈ 18, 2024
ಬಳ್ಳಾರಿ,ಜು.18(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜು.21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಅವರು ಉದ್ಘಾಟನೆ ಮಾಡುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಬಳ್ಳಾರಿ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಂಘದ ಜಿಲ್ಲಾಧ್ಯಕ್ಷ ಹೆಚ್.ರುದ್ರಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಿಷ್ಕಿಂದ ವಿದ್ಯಾಲಯದ ಭೌತವಿಜ್ಞಾನ ವಿಭಾಗದ ಪ್ರಾಧ್ಯಾಪಕರು ಮತ್ತು ಡೀನ್ ಪ್ರೊ.ಎಸ್.ಮಂಜುನಾಥ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕೆ.ವಸಂತ್‍ಕುಮಾರ್ ತಂಡದಿಂದ ವಚನ ಸಂಗೀತ ಇರಲಿದೆ.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ 10.30 ಕ್ಕೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವರೆಗೆ ಮೆರವಣಿಗೆ ನಡೆಯಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ