ಗುರುವಾರ, ಜುಲೈ 18, 2024

ಜು.20 ರಂದು ‘ತಿಂಗಳ ಸೊಬಗು’ ಸಾಂಸ್ಕøತಿಕ ಕಾರ್ಯಕ್ರಮ

ಬಳ್ಳಾರಿ,ಜು.18(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಸಾಂಸ್ಕøತಿಕ ಸಮುಚ್ಛಯ ನಿರ್ವಹಣಾ ಸಮಿತಿ ವತಿಯಿಂದ ಕಲಾ ಪ್ರತಿಭೆಯನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಜುಲೈ 20 ರಂದು ಸಂಜೆ 06.30 ಗಂಟೆಗೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ನಾಡೋಜ ಸುಭದ್ರಮ್ಮ ಮನ್ಸೂರು ಬಯಲು ರಂಗಮಂದಿರ ಸಾಂಸ್ಕøತಿಕ ಸಮುಚ್ಛಯದಲ್ಲಿ ‘ತಿಂಗಳ ಸೊಬಗು’ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಬಳ್ಳಾರಿಯ ಪ್ರಕಾಶ್ ಹೆಮ್ಮಾಡಿ ಅವರಿಂದ ಜಾನಪದ ಜಾದು ಕಾರ್ಯಕ್ರಮ ಮತ್ತು ಸಿರುಗುಪ್ಪ ತಾಲ್ಲೂಕಿನ ಸಿರಿಗೇರಿಯ ಧಾತ್ರಿ ರಂಗ ಸಂಸ್ಥೆಯಿಂದ ‘ಶ್ರೀ ಕೃಷ್ಣ ಸಂಧಾನ’ ಹಾಸ್ಯ ನಾಟಕ ಕಾರ್ಯಕ್ರಮ ಇರಲಿವೆ. ಸಾರ್ವಜನಿಕರಿಗೆ ಪ್ರವೇಶ ಮುಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ವೀಕ್ಷಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಕೋರಲಾಗಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ