ಗುರುವಾರ, ಜುಲೈ 18, 2024
ಜು.20 ರಂದು ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಸಹಭಾಗೀದರ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ
ಬಳ್ಳಾರಿ,ಜು.18(ಕರ್ನಾಟಕ ವಾರ್ತೆ):
ರಾಜ್ಯ ಮಕ್ಕಳ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು ಜು.19 ಮತ್ತು 20 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ಜು.19 ರಂದು ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಹಾಗೂ ಸರ್ಕಾರಿ ಶಾಲೆಗಳು, ಮಕ್ಕಳ ಪಾಲನಾ ಸಂಸ್ಥೆ, ಅಂಗನವಾಡಿ ಕೇಂದ್ರಗಳಿಗೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡುವರು.
ಜು.20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣದಲ್ಲಿ ಮಕ್ಕಳ ರಕ್ಷಣೆ ವ್ಯವಸ್ಥೆ ಕುರಿತು ಭಾಗೀದಾರರೊಂದಿಗೆ ಸಮಾಲೋಚನಾ ಸಭೆ ನಡೆಸುವರು. ನಂತರ ಮಧ್ಯಾಹ್ನ 01.30 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ