ಶನಿವಾರ, ಜುಲೈ 20, 2024
ಜು.22 ರಂದು ವಿಶ್ವ ಮೆದುಳು ದಿನಾಚರಣೆ
ಬಳ್ಳಾರಿ,ಜು.20(ಕರ್ನಾಟಕ ವಾರ್ತೆ):
ಜಿಲ್ಲಾ ಆಸ್ಪತ್ರೆ ವತಿಯಿಂದ ಜು.22 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಅನಂತಪುರ ರಸ್ತೆಯ ಜಿಲ್ಲಾ ಆಸ್ಪತ್ರೆಯ ಕೊಠಡಿ ಸಂಖ್ಯೆ 7 ರಲ್ಲಿ ವಿಶ್ವ ಮೆದುಳು ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಬಸರೆಡ್ಡಿ.ಎನ್ ಅವರು ತಿಳಿಸಿದ್ದಾರೆ.
ಹಿರಿಯ ಸಿವಿಲ್ ನ್ಯಾಯಧೀಶರೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ರಾಜೇಶ್ ಎನ್.ಹೊಸಮನೆ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ವಿಮ್ಸ್ ನಿರ್ದೇಶಕ ಗಂಗಾಧರ ಗೌಡ ಸೇರಿದಂತೆ ಇಲಾಖೆಯ ಅಧಿಕಾರಿಗಳು, ತಜ್ಞ ವೈದ್ಯರು ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ