ಶನಿವಾರ, ಜುಲೈ 20, 2024

ಕುಷ್ಠ ರೋಗ ಪತ್ತೆಹಚ್ಚುವ ಅಭಿಯಾನ: ಜು. 23 ರಂದು ಪೂರ್ವಭಾವಿ ಸಭೆ

ಬಳ್ಳಾರಿ,ಜು.20(ಕರ್ನಾಟಕ ವಾರ್ತೆ): ಕುಷ್ಠರೋಗ ಪತ್ತೆಹಚ್ಚುವ ಅಭಿಯಾನ-2024ರ ಪೂರ್ವಭಾವಿ ಸಭೆಯನ್ನು ಜು.23 ರಂದು ಮದ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ,. ಜಿಲ್ಲೆಯ ಬಳ್ಳಾರಿ, ಸಿರುಗುಪ್ಪ, ಸಂಡೂರು ತಾಲ್ಲೂಕುಗಳಲ್ಲಿ ಜು.29 ರಿಂದ ಆ.14ರ ವರೆಗೆ ಕುಷ್ಠರೋಗ ಪತ್ತೆಹಚ್ಚುವ ಅಭಿಯಾನ-2024 ಕಾರ್ಯಕ್ರಮ ಆಯೋಜಿಸಲಾಗಿದೆ. ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ